ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಯೋಧ

7

ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಯೋಧ

Published:
Updated:

ಅಗರ್ತಲ: ತ್ರಿಪುರಾ ರಾಜ್ಯ ರೈಫಲ್ಸ್‌ನ (ಟಿಆರ್‌ಎಸ್‌) ಯೋಧ ಮಾಣಿಕ್‌ ಘೋಶ್‌ (40) ತನ್ನ ಪತ್ನಿ ಮತ್ತು ಮಕ್ಕಳನ್ನು ಗುಂಡಿಕ್ಕಿ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಲ್ಲಿನ ಮಲಯನಗರದ ತಮ್ಮ ನಿವಾಸದಲ್ಲಿ ಪತ್ನಿ ರತ್ನಾ ಘೋಶ್‌ (34), ಮಗಳು ಹೃತಿಕಾ ಘೋಶ್‌ (2) ಮತ್ತು ಮಗ ದೇಬ್‌ರಾಜ್‌ ಘೋಶ್‌ (11) ಅವರನ್ನು ಯೋಧ ಸೇವಾ ಬಂದೂಕಿನಿಂದ ಹತ್ಯೆ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಮುಂಜಾನೆ 8 ಗಂಟೆ ಸುಮಾರಿಗೆ ಯೋಧ ಮತ್ತು ಪತ್ನಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡು ಕೃತ್ಯ ಎಸಗಿದ್ದಾರೆ. ಗುಂಡಿನ ಸದ್ದು ಕೇಳಿ ಕೂಡಲೇ ನಿವಾಸದ ಬಳಿ ಬಂದ ಗ್ರಾಮಸ್ಥರು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಹೇಳಿದರು.

ಸೇವಾ ಬಂದೂಕನ್ನು ಯೋಧ ಮನೆಗೆ ಹೇಗೆ ತಂದರು ಎಂಬ ಸುದ್ದಿಗಾರರ ಪ್ರಶ್ನೆಗೆ, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry