ಮಂಗಳವಾರ, ಮಾರ್ಚ್ 2, 2021
31 °C

ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ಗೆ 5 ದಿನಗಳ ಪೆರೋಲ್

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ಗೆ 5 ದಿನಗಳ ಪೆರೋಲ್

ರಾಂಚಿ: ಬಹುಕೋಟಿ ಮೇವು ಹಗರಣ ಸಂಬಂಧ ಜೈಲು ಬಂಧಿಯಾಗಿರುವ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಮೇ 12ರವರೆಗೆ ಐದು ದಿನಗಳ ಕಾಲ ಪೆರೋಲ್ ದೊರೆತಿದೆ.

ಪಾಟ್ನದಲ್ಲಿ ಮೇ10 ರಿಂದ 14ರವರೆಗೆ ನೆರವೇರಲಿರುವ ಹಿರಿಯ ಮಗ ತೇಜ್ ಪ್ರತಾಪ್ ಮದುವೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.

ಲಾಲೂ ಅವರು ಸಕ್ಕರೆ ಕಾಯಿಲೆ ಹಾಗೂ ಕಿಡ್ನಿ ಸಂಬಂಧಿ ಸಮಸ್ಯೆ ಕಾರಣ ರಾಂಚಿಯಲ್ಲಿರುವ ರಾಜೇಂದ್ರ ಇನ್ಸ್‌ಟಿಟ್ಯೂಟ್ ಆಫ್  ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಜೈಲು ಆಡಳಿತಾಧಿಕಾರಿಗಳು ಮತ್ತು ಗೃಹ ಇಲಾಖೆಯ ಸಮಾಲೋಚನೆ ಬಳಿಕ ಪೆರೋಲ್‌ಗೆ ಅನುಮತಿ ದೊರೆತಿದ್ದು, ಬುಧವಾರ ರಾಂಚಿಯಿಂದ ಪಾಟ್ನಾಕ್ಕೆ ವಿಮಾನದಲ್ಲಿ ತೆರಳಲಿದ್ದಾರೆ ಎಂದು ಆರ್‌ಜೆಡಿ ನಾಯಕ ಭೋಲಾ ಯಾದವ್ ತಿಳಿಸಿದ್ದಾರೆ.

ಲಾಲೂ ಪ್ರಸಾದ್ ಯಾದವ್ ಮಗ ತೇಜ್ ಪ್ರತಾಪ್ ಬಿಹಾರದ ಮಾಜಿ ಮುಖ್ಯಮಂತ್ರಿ ದರೋಗ ಪ್ರಸಾದ್ ರಾಯ್ ಅವರ ಮೊಮ್ಮಗಳಾದ ಐಶ್ವರ್ಯ ರಾಯ್ ಅವರನ್ನು ವಿವಾಹವಾಗಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.