ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದುವಣಗಿತ್ತಿಯಂತೆ ಮತಗಟ್ಟೆಗಳ ಶೃಂಗಾರ

ಡಿ.ಸಿ.ಯಿಂದ ಪಿಂಕ್ ಮತಗಟ್ಟೆಗಳ ಪರಿಶೀಲನೆ
Last Updated 9 ಮೇ 2018, 11:18 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಸ್ಥಾಪಿಸಿರುವ 18 ಪಿಂಕ್‌ ಮತಗಟ್ಟೆಗಳು ಮದುವಣಗಿತ್ತಿಯಂತೆ ಶೃಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿವೆ.

ಜಿಲ್ಲಾಧಿಕಾರಿ ಎಂ.ಲೋಕೇಶ್ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್ ಅವರು ಮಂಗಳವಾರ ಶಿವಮೊಗ್ಗ ನಗರದ ಗುಡ್ಡೇಕಲ್ ಬಳಿ ಸಿದ್ದೇಶ್ವರ ನಗರದಲ್ಲಿ ಸಜ್ಜುಗೊ ಳಿಸಲಾಗಿರುವ ಪಿಂಕ್ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಎಲ್ಲಾ ಪಿಂಕ್ ಮತಗಟ್ಟೆಗಳು ಪಿಂಕ್ ಬಣ್ಣದಿಂದ ಕಂಗೊಳಿಸುತ್ತಿದ್ದು, ಬಲೂನ್ ತೋರಣ, ಮಹಿಳಾ ಮತದಾರರನ್ನು ಮತಗಟ್ಟೆಗೆ ಆಹ್ವಾನಿಸುವ ಫ್ಲೆಕ್ಸ್‌ಗಳಿಂದ ಕಂಗೊಳಿಸುತ್ತಿವೆ. ಈ ಮತಗಟ್ಟೆಗಳಲ್ಲಿ ಚುನಾವಣಾಧಿಕಾರಿ ಸೇರಿದಂತೆ ಎಲ್ಲಾ ಸಿಬ್ಬಂದಿ ಮಹಿಳೆಯರೇ ಇರುತ್ತಾರೆ. ಹೆಚ್ಚಿನ ಪೊಲೀಸ್ ಸಿಬ್ಬಂದಿ ಸಹ ಮಹಿಳೆಯರೇ ಇರುವುದು ಇದರ ವಿಶೇಷ. ಇದೇ ಮೊದಲ ಬಾರಿಗೆ ಚುನಾವಣಾ ಆಯೋಗ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲು ಸೂಚನೆ ನೀಡಿದೆ. ಅದರಂತೆ ಆಯ್ದ ಮತಗಟ್ಟೆಗಳನ್ನು ಪಿಂಕ್ ಮತಗಟ್ಟೆಗಳೆಂದು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಪಿಂಕ್ ಮತಗಟ್ಟೆಗಳಲ್ಲಿಯೇ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿರುವ ಪುರುಷ ಮತದಾರರು ಸಹ ಮತ ಚಲಾಯಿಸಬೇಕಾಗಿದೆ. ಪ್ರತಿ ಮತಗಟ್ಟೆಯಲ್ಲೂ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಸರತಿ ಸಾಲು ವ್ಯವಸ್ಥೆ ಇರಲಿದೆ. ಪಿಂಕ್ ಮತಗಟ್ಟೆಗಳಲ್ಲಿ ಮಹಿಳೆಯರಿಗೆ ವಿಶ್ರಾಂತಿಗೆ ಕೊಠಡಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಪ್ರೊಬೆಷನರಿ ಐಎಎಸ್ ಅಧಿಕಾರಿ ರಾಹುಲ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT