ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರನ್ನು ಬಲವಂತವಾಗಿ ಕರೆ ತಂದರೆ ಕ್ರಮ:ಜಿಲ್ಲಾಧಿಕಾರಿ

Last Updated 9 ಮೇ 2018, 13:24 IST
ಅಕ್ಷರ ಗಾತ್ರ

ರಾಯಚೂರು: ಮತದಾರರನ್ನು ಬಲವಂತವಾಗಿ ವಾಹನಗಳಲ್ಲಿ ಕರೆ ತರುವುದು ಖಚಿತವಾದರೆ, ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಬಗಾದಿ ಗೌತಮ್ ಎಚ್ಚರಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗದ ಜನರು ಹೆಚ್ಚಾಗಿ ಗುಳೆ ಹೋಗಿದ್ದಾರೆ. ಅಂಥವರು ಮತದಾನ ದಿನ ಬಂದು ತಮ್ಮ ಹಕ್ಕು ಚಲಾಯಿಸಲು ಯಾವುದೇ ತೊಂದರೆ ಇಲ್ಲ. ಆದರೆ, ಬಲವಂತವಾಗಿ ಕರೆ ತರಬಾರದು. ಮತದಾರರನ್ನು ಓಲೈಕೆ ಮಾಡುವುದು ಕಂಡು ಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 22 ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಅದರಲ್ಲಿ ನಗರ ಕ್ಷೇತ್ರದಲ್ಲಿ 10 ಉಳಿದ ಆರು ಕ್ಷೇತ್ರಗಳಿಗೆ ತಲಾ ಎರಡು ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈಗಾಗಲೇ ಸಿದ್ಧತಾ ಕಾರ್ಯಗಳು ನಡೆದಿದ್ದು, ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿ ಮತ ಕ್ಷೇತ್ರದಲ್ಲಿ ಒಂದು ಮಾದರಿ ಮತ ಗಟ್ಟೆಯನ್ನು ಸ್ಥಾಪಿಸಲಾಗಿದೆ. 1,766 ಒಟ್ಟು ಮತಗಟ್ಟೆಗಳು, 39 ಹೆಚ್ಚುವರಿ ಮತಗಟ್ಟೆಗಳಿವೆ. 1,566 ಮತಗಟ್ಟೆಗಳಿದ್ದವು. ಈ ಬಾರಿ 239 ಹೆಚ್ಚಾಗಿವೆ. ಹೆಚ್ಚು ಅಗತ್ಯವಿರುವ ಕಡೆ ಮತಗಟ್ಟೆ ಸ್ಥಾಪಿಸಲಾಗಿದೆ ಎಂದು ಹೇಳಿದರು.

ಚುನಾವಣಾಧಿಕಾರಿಗಳು ವಿವಿಧೆಡೆ ದಾಳಿ ನಡೆಸಿದ್ದು, 50 ಲಕ್ಷಕ್ಕೂ ಅಧಿಕ ನಗದು ಹಾಗೂ ಸಾಕಷ್ಟು ಪ್ರಮಾಣದ ಮದ್ಯ ಜಪ್ತಿ ಮಾಡಿದ್ದಾರೆ. ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ಚುನಾವಣೆ ಕೊನೆ ಎರಡು ದಿನಗಳಲ್ಲಿ ಸಾಕಷ್ಟು ಹಣ ಹರಿದಾಡುವ ಮಾಹಿತಿಯಿದ್ದು, ಹೆಚ್ಚುವರಿ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ನೇಮಿಸಲಾಗುವುದು. ಯಾವುದೇ ಕಾರಣಕ್ಕೂ ಅಕ್ರಮ ಜರುಗಲು ಆಸ್ಪದ ನೀಡುವುದಿಲ್ಲ. ಮುಖ್ಯವಾಗಿ ಚೆಕ್‌ಪೋಸ್ಟ್‌ಗಳಲ್ಲಿ ಸಾಕಷ್ಟು ಬಂದೋಬಸ್ತ್ ಮಾಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT