ಮಂಗಳವಾರ, ಮಾರ್ಚ್ 9, 2021
23 °C

ಫೋರ್ಬ್ಸ್‌ ಪಟ್ಟಿ: ಮೋದಿಗೆ 9ನೇ ಸ್ಥಾನ

ಪಿಟಿಐ Updated:

ಅಕ್ಷರ ಗಾತ್ರ : | |

ಫೋರ್ಬ್ಸ್‌ ಪಟ್ಟಿ: ಮೋದಿಗೆ 9ನೇ ಸ್ಥಾನ

ನ್ಯೂಯಾರ್ಕ್: ಫೋರ್ಬ್ಸ್‌ ನಿಯತಕಾಲಿಕೆ ಬಿಡುಗಡೆ ಮಾಡಿದ 2018ರ ಹೆಚ್ಚು ಪ್ರಭಾವಶಾಲಿ ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 9ನೇ ಸ್ಥಾನ ಗಳಿಸಿದ್ದಾರೆ. ಫೋರ್ಬ್ಸ್‌ ಬಿಡುಗಡೆ ಮಾಡಿದ 75 ಜಾಗತಿಕ ಪ್ರಭಾವಶಾಲಿ ನಾಯಕ ಮತ್ತು ನಾಯಕಿಯರ ಪಟ್ಟಿಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇದೇ ಮೊದಲ ಬಾರಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಪುಟಿನ್ ಅವರು ಸತತ ನಾಲ್ಕು ವರ್ಷಗಳಿಂದ ಮೊದಲ ಸ್ಥಾನ ಕಾಯ್ದುಕೊಂಡಿದ್ದರು. ನಾಲ್ಕು ಮತ್ತು ಐದನೇ ಸ್ಥಾನದಲ್ಲಿ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್‌, ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್ ಇದ್ದಾರೆ. ಭಾರತ ಮೂಲದ ಸತ್ಯ ನಾದೆಲ್ಲ 40ನೇ ಸ್ಥಾನ ಗಳಿಸಿದ್ದಾರೆ.  ಝಕರ್‌ ಬರ್ಗ್‌ ಅವರು 13ನೇ ಸ್ಥಾನ ಪಡೆದಿದ್ದರೆ, ಬ್ರಿಟನ್‌ ಪ್ರಧಾನಿ ತೆರೆಸಾ ಮೇ 14ನೇ ಸ್ಥಾನ ಪಡೆದಿದ್ದಾರೆ. ಆ್ಯಪಲ್‌ ಸಿಇಒ ಟಿಮ್‌ ಕುಕ್‌ 24ನೇ ಸ್ಥಾನದಲ್ಲಿದ್ದಾರೆ.

ಮೋದಿ ಹೊರತಾಗಿ ಸ್ಥಾನ ಪಡೆದಿರುವ ಇನ್ನೊಬ್ಬ ಭಾರತೀಯ ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್‌ ಅಂಬಾನಿ. ಇವರು 32ನೇ ಸ್ಥಾನ ಪಡೆದಿದ್ದಾರೆ ಎಂದು ಫೋರ್ಬ್ಸ್ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.