ಶುಕ್ರವಾರ, ಫೆಬ್ರವರಿ 26, 2021
26 °C

ತವರಿಗೆ ತೆರಳಿದ ಮಾರ್ಕ್ ವುಡ್‌

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ತವರಿಗೆ ತೆರಳಿದ ಮಾರ್ಕ್ ವುಡ್‌

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್‌, ಇಂಗ್ಲೆಂಡ್‌ನ ಮಾರ್ಕ್‌ ವುಡ್ ದೇಶಿ ಕ್ರಿಕೆಟ್‌ನಲ್ಲಿ ಆಡುವುದಕ್ಕಾಗಿ ತಾಯ್ನಾಡಿಗೆ ಮರಳಿದ್ದಾರೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಆಡಿದ್ದ ಅವರು ನಂತರ ಒಂಬತ್ತು ಪಂದ್ಯಗಳಲ್ಲಿ ಅವಕಾಶ ಪಡೆದಿರಲಿಲ್ಲ.

ಇದೀಗ ಇಂಗ್ಲೆಂಡ್‌ ಟೆಸ್ಟ್ ತಂಡದಲ್ಲಿ ಸ್ಥಾನ ಗಳಿಸುವತ್ತ ಅವರು ಚಿತ್ತ ಹರಿಸಿದ್ದಾರೆ. ಇದೇ ಕಾರಣದಿಂದ ತವರಿಗೆ ಮರಳಿದ್ದಾರೆ. ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅವರು ಈ ವಿಷಯವನ್ನು ಬರೆದುಕೊಂಡಿದ್ದಾರೆ.

ವುಡ್ ಒಟ್ಟು 11 ಟೆಸ್ಟ್ ಪಂದ್ಯಗಳನ್ನು ಆಡಿದ್ದು 28 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಕೌಂಟಿ ಟೂರ್ನಿಯಲ್ಲಿ ಡುರ್ಹಾಮ್‌ ತಂಡದ ಪರ ಆಡಲಿದ್ದಾರೆ. ತಂಡದ ಮೊದಲ ಪಂದ್ಯ ಡರ್ಬಿಶೈರ್ ವಿರುದ್ಧ ಈ ವಾರಾಂತ್ಯದಲ್ಲಿ ನಡೆಯಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.