ಅಂತರರಾಷ್ಟ್ರೀಯ ವಿಜ್ಞಾನ ಸ್ಪರ್ಧೆಗೆ ಆಯ್ಕೆ

7

ಅಂತರರಾಷ್ಟ್ರೀಯ ವಿಜ್ಞಾನ ಸ್ಪರ್ಧೆಗೆ ಆಯ್ಕೆ

Published:
Updated:
ಅಂತರರಾಷ್ಟ್ರೀಯ ವಿಜ್ಞಾನ ಸ್ಪರ್ಧೆಗೆ ಆಯ್ಕೆ

ಶ್ರೀರಂಗಪಟ್ಟಣ: ಅಮೆರಿಕದ ಪಿಟ್ಸ್‌ಬರ್ಗ್‌ನಲ್ಲಿ ಮೇ 13ರಿಂದ ನಡೆಯಲಿರುವ ಅಂತರರಾಷ್ಟ್ರೀಯ ವಿಜ್ಞಾನ ಸ್ಪರ್ಧೆಗೆ ಇಲ್ಲಿನ ಸಿ.ಎಸ್‌.ಮೊಹಮದ್‌ ಸುಹೇಲ್‌ ಆಯ್ಕೆಯಾಗಿದ್ದಾರೆ.

ಕವಿ ಅನಾರ್ಕಲಿ ಸಲೀಂ ಮತ್ತು ಕನ್ನಡ ಅಧ್ಯಾಪಕಿ ಪರ್ವೀನ್‌ ಸಲೀಂ ಅವರ ಪುತ್ರ. ಪ್ರಥಮ ಪಿಯುಸಿ ಅಧ್ಯಯನ ಮಾಡುತ್ತಿದ್ದಾರೆ. 2017ರ ನವೆಂಬರ್‌ನಲ್ಲಿ ದೆಹಲಿಯಲ್ಲಿ ನಡೆದ ‘ರಾಷ್ಟ್ರೀಯ ವಿಜ್ಞಾನ ಸ್ಪರ್ಧೆ ಐರಿಸ್‌–2017’ ರಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅಂತರರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಿಟ್ಸ್‌ಬರ್ಗ್‌ನಲ್ಲಿ ಪ್ರಬಂಧ ಮಂಡಿಸಲಿದ್ದಾರೆ.

ಕಲುಷಿತ ನೀರು, ಮಾನವ ನಡಿಗೆ, ಶಬ್ದದ ಶಕ್ತಿಯಿಂದ ವಿದ್ಯುತ್‌ ಉತ್ಪಾದನೆ ಕುರಿತು ಪ್ರಯೋಗ ನಡೆಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry