ಬುಧವಾರ, ಮಾರ್ಚ್ 3, 2021
22 °C

ಲಾಲು ವಿರುದ್ಧ ಮೊಕದ್ದಮೆ ದಾಖಲಿಸಲು ಕಾಲಾವಕಾಶ

ಪಿಟಿಐ Updated:

ಅಕ್ಷರ ಗಾತ್ರ : | |

ಲಾಲು ವಿರುದ್ಧ ಮೊಕದ್ದಮೆ ದಾಖಲಿಸಲು ಕಾಲಾವಕಾಶ

ನವದೆಹಲಿ: ಐಆರ್‌ಸಿಟಿಸಿ ಹೋಟೆಲ್‌ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌, ಪತ್ನಿ ರಾಬ್ಡಿದೇವಿ ಹಾಗೂ ಅವರ ಪುತ್ರ ತೇಜಸ್ವಿ ಯಾದವ್ ವಿರುದ್ಧ ಮೊಕದ್ದಮೆ ದಾಖಲಿಸಲು ದೆಹಲಿ ನ್ಯಾಯಾಲಯ ಸಿಬಿಐಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ಈ ಅವಧಿಯಲ್ಲಿ ಸಂಬಂಧಿಸಿದ ಇಲಾಖೆಗಳಿಂದ ಅನುಮೋದನೆ ಪಡೆಯುವಂತೆ ಸೂಚಿಸಲಾಗಿದೆ.

ರೈಲ್ವೆ ಮಂಡಳಿಯ ಹೆಚ್ಚುವರಿ ಸದಸ್ಯ ಬಿ.ಕೆ. ಅಗರವಾಲ್‌ ವಿರುದ್ಧವೂ ಮೊಕದ್ದಮೆ ದಾಖಲಿಸಲು ಜೂನ್‌ 1ರ ಒಳಗೆ ಅಗತ್ಯವಿರುವ ಅನುಮತಿ ಪಡೆಯುವಂತೆ ನ್ಯಾಯಾಲಯ ಸೂಚಿಸಿದೆ. ಅಗರವಾಲ್‌ ಅವರು ಐಆರ್‌ಸಿಟಿಸಿ ಹೋಟೆಲ್‌ಗಳ ಪ್ರಧಾನ ವ್ಯವಸ್ಥಾಪಕರಾಗಿಯೂ ಈ ಹಿಂದೆ ಕಾರ್ಯನಿರ್ವವಹಿಸಿದ್ದರು.

ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಲವು ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಂಪನಿಗಳು ಮತ್ತು 12 ಮಂದಿ ವಿರುದ್ಧ ಸಿಬಿಐ ಏಪ್ರಿಲ್‌ 16ರಂದು ಆರೋಪಪಟ್ಟಿ ಸಲ್ಲಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.