ಟ್ರ್ಯಾಕ್ಟರ್ ಪಲ್ಟಿ; ವ್ಯಕ್ತಿ ಸಾವು; ಇಬ್ಬರು ಗಂಭೀರ ಗಾಯ

7

ಟ್ರ್ಯಾಕ್ಟರ್ ಪಲ್ಟಿ; ವ್ಯಕ್ತಿ ಸಾವು; ಇಬ್ಬರು ಗಂಭೀರ ಗಾಯ

Published:
Updated:

ಮಧುಗಿರಿ : ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಜೀವಗೊಂಡನಹಳ್ಳಿ ಗ್ರಾಮದ ಸಮೀಪ ವಿದ್ಯುತ್ ಕಂಬ ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಬುಧವಾರ ಪಲ್ಟಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಪುಲಮಾಚಿ ಗ್ರಾಮದ ಪಂಚಲಿಂಗ (28) ಮೃತ ವ್ಯಕ್ತಿ, ಜಯರಾಮ (35) ಹಾಗೂ ರಾಜ (28) ಎಂಬುವವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗೇಶ ಎಂಬುವವರಿಗೆ ಗಾಯಗಳಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಿಡಿಗೇಶಿ ಗ್ರಾಮದಿಂದ ಟ್ರ್ಯಾಕ್ಟರ್‌ನಲ್ಲಿ ವಿದ್ಯುತ್ ಕಂಬಗಳನ್ನು ಹಾಕಿಕೊಂಡು ಸೋದೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಪಿ ಹೊಡೆಯಿತು. ಆಗ ಮೂರು ಮಂದಿಯ ಮೇಲೆ ವಿದ್ಯುತ್ ಕಂಬಗಳು ಉರುಳಿ ಈ ಅವಘಡ ನಡೆದಿದೆ.

ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry