ಲಾಭ ಗಳಿಕೆ ವಹಿವಾಟು ಸೂಚ್ಯಂಕ ಅಲ್ಪ ಇಳಿಕೆ

ಮುಂಬೈ: ಕಳೆದ ಮೂರು ದಿನಗಳಿಂದ ಏರುಮುಖವಾಗಿದ್ದ ದೇಶಿ ಷೇರುಪೇಟೆಗಳಲ್ಲಿನ ವಹಿವಾಟು ಗುರುವಾರ ಇಳಿಕೆ ಕಂಡಿತು.
ಹೂಡಿಕೆದಾರರು ಲಾಭ ಗಳಿಕೆಯ ಉದ್ದೇಶದಿಂದ ವಹಿವಾಟು ನಡೆಸಿದರು. ಇದರಿಂದಾಗಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 73 ಅಂಶ ಇಳಿಕೆಯಾಗಿ 35,246 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿತು.
ಕಚ್ಚಾ ತೈಲ ಬೆಲೆ ಏರಿಕೆ ಮತ್ತು ರೂಪಾಯಿ ಮೌಲ್ಯ ಇಳಿಕೆಯ ಆತಂಕ ಹಾಗೂ ಶನಿವಾರ ಕರ್ನಾಟಕ ವಿಧಾನಸಭಾ ಚುನಾವಣೆ ಇರುವುದರಿಂದ ಹೂಡಿಕೆದಾರರು ಹೆಚ್ಚಿನ ಚಟುವಟಿಕೆ ನಡೆಸಲಿಲ್ಲ.
ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 77.76 ಡಾಲರ್‌ಗಳಿಗೆ ಏರಿಕೆಯಾಗಿದೆ. ಇದು 2014ರ ನವೆಂಬರ್ ನಂತರ ದಾಖಲಾಗಿರುವ ಅತ್ಯಂತ ಗರಿಷ್ಠ ಮಟ್ಟವಾಗಿದೆ.
ವಿದೇಶಿ ಬಂಡವಾಳ ಹೊರಹರಿವು ನಿರಂತರವಾಗಿರುವುದು ಹಾಗೂ ತ್ರೈಮಾಸಿಕದಲ್ಲಿ ಕೆಲವು ಕಂಪನಿಗಳ ಆರ್ಥಿಕ ಸಾಧನೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲದೇ ಇರುವುದರಿಂದ ವಹಿವಾಟು ಇಳಿಕೆ ಕಂಡಿದೆ ಎಂದು ದಲ್ಲಾಳಿಗಳು ಹೇಳಿದ್ದಾರೆ.
ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕವು (ಎನ್‌ಎಸ್‌ಇ) ನಿಫ್ಟಿ 25 ಅಂಶ ಇಳಿಕೆ ಕಂಡು 10,716 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.