‘ನೊಬೆಲ್‌ ಶಾಂತಿ ಪ್ರಶಸ್ತಿ ಪಡೆಯುವ ಆಸಕ್ತಿ ಇಲ್ಲ’

7

‘ನೊಬೆಲ್‌ ಶಾಂತಿ ಪ್ರಶಸ್ತಿ ಪಡೆಯುವ ಆಸಕ್ತಿ ಇಲ್ಲ’

Published:
Updated:
‘ನೊಬೆಲ್‌ ಶಾಂತಿ ಪ್ರಶಸ್ತಿ ಪಡೆಯುವ ಆಸಕ್ತಿ ಇಲ್ಲ’

ವಾಷಿಂಗ್ಟನ್‌: ‘ನೊಬೆಲ್‌ ಶಾಂತಿ ಪ್ರಶಸ್ತಿ ಪಡೆಯುವುದಕ್ಕೆ ನಾನು ಆಸಕ್ತಿ ಹೊಂದಿಲ್ಲ. ಆದರೆ ಜಗತ್ತನ್ನು ಗೆಲ್ಲಲು ನಾನು ಬಯಸುತ್ತೇನೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

‘ನೀವು ನೊಬೆಲ್ ಶಾಂತಿ ಪ್ರಶಸ್ತಿ ಪಡೆಯುವುದಕ್ಕೆ ಅರ್ಹರೇ ?’ ಎಂದು ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಅದಕ್ಕೆ ಅರ್ಹ ಎಂದು  ಪ್ರತಿಯೊಬ್ಬರೂ ಭಾವಿಸುತ್ತಾರೆ, ಆದರೆ, ನಾನು ಹಾಗೆ ಹೇಳಿಲ್ಲ’ ಎಂದರು .

‘ಉತ್ತರ ಕೊರಿಯಾವು ಪರಮಾಣು ಪರೀಕ್ಷೆ ನಿಲ್ಲಿಸುವ ನಿಟ್ಟಿನಲ್ಲಿ ಪ್ರಯತ್ನಿಸಿದ ಟ್ರಂಪ್‌ ಅವರು ನೊಬೆಲ್‌ ಶಾಂತಿ ಪ್ರಶಸ್ತಿ ಪಡೆಯಲು ಅರ್ಹ ವ್ಯಕ್ತಿ' ಎಂದು ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್‌ ತಿಳಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry