7

ನೇಪಾಳಕ್ಕೆ ಇಂದು ಮೋದಿ

Published:
Updated:
ನೇಪಾಳಕ್ಕೆ ಇಂದು ಮೋದಿ

ಕಠ್ಮಂಡು: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಪ್ರವಾಸಕ್ಕಾಗಿ ನೇಪಾಳಕ್ಕೆ ಶುಕ್ರವಾರ ಬರಲಿದ್ದು, ಅವರ ಸ್ವಾಗತಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.

ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ಹಾಗೂ ಭಾರತದ ಸಹಯೋಗದಲ್ಲಿ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳ ಕುರಿತು ಅಲ್ಲಿನ ಉನ್ನತ ನಾಯಕರೊಂದಿಗೆ ಮೋದಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜನಕಪುರದಿಂದ ಮೋದಿ ಪ್ರವಾಸ ಆರಂಭಿಸುವರು. ಅಲ್ಲಿನ ಜಾನಕಿ ದೇವಾಲಯಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವರು ಎಂದು ಅಧಿಕಾರಿಗಳು ಹೇಳಿದ್ದಾರೆ.

ನೇಪಾಳದ ವಿದೇಶಾಂಗ ಸಚಿವ ಪ್ರದೀಪ್‌ ಗ್ಯಾವಾಲಿ ಹಾಗೂ ಭಾರತದ ರಾಯಭಾರಿ ಮಂಜೀವ್‌ ಸಿಂಗ್‌ ಪುರಿ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry