ದೇವಸ್ಥಾನದ ಹುಂಡಿ ಕಳವು

4

ದೇವಸ್ಥಾನದ ಹುಂಡಿ ಕಳವು

Published:
Updated:

ಬೆಂಗಳೂರು: ಜಯನಗರದ 4ನೇ ಟಿ ಬ್ಲಾಕ್‌ನಲ್ಲಿರುವ ಶಕ್ತಿಗಣಪತಿ ದೇವಸ್ಥಾನದ ಕಿಟಕಿ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿಯ ಬೀಗ ಮುರಿದು ಹಣ ದೋಚಿದ್ದಾರೆ.

ಇದೇ 7ರಂದು ರಾತ್ರಿ ದೇವಸ್ಥಾನದ ಬಾಗಿಲು ಹಾಕಲಾಗಿತ್ತು.  8ರಂದು ಬೆಳಿಗ್ಗೆ 7.30ಕ್ಕೆ  ಬಾಗಿಲು ತೆರೆದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಕಿಟಕಿ ಮುರಿದಿರುವ ಕಳ್ಳರು, ಹುಂಡಿಯಲ್ಲಿರುವ ಕಾಣಿಕೆ ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ದೇವಸ್ಥಾನದ ಕಾರ್ಯದರ್ಶಿ ತಿಲಕ್‌ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮನೆಗೆ ಕನ್ನ: ಜಯನಗರದ 9ನೇ ಬ್ಲಾಕ್‌ನಲ್ಲಿರುವ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಬಗ್ಗೆಯೂ ತಿಲಕ್‌ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಲ್ಲಿನ ನಿವಾಸಿ ಶಲಾ ಎಂಬುವರು ಸಂಬಂಧಿಯೊಬ್ಬರ ಅಂತ್ಯಕ್ರಿಯೆಗಾಗಿ ಮೇ 6ರಂದು ಆಂಧ್ರಪ್ರದೇಶಕ್ಕೆ ಹೋಗಿದ್ದರು. 8ರಂದು ಮರಳಿ ಬಂದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ.

ಮನೆಯ ಬಾಗಿಲು ಮುರಿದಿರುವ ಕಳ್ಳರು ಚಿನ್ನಾಭರಣ ಹಾಗೂ ನಗದು ದೋಚಿದ್ದಾರೆ. ಈ ಕುರಿತು ದೂರು ದಾಖಲಾಗಿದ್ದು, ಕಳ್ಳರ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry