ಹೊಸಕೋಟೆ: ಕಾಂಗ್ರೆಸ್‌, ಬಿಜೆಪಿ ರೋಡ್ ಷೋ

7

ಹೊಸಕೋಟೆ: ಕಾಂಗ್ರೆಸ್‌, ಬಿಜೆಪಿ ರೋಡ್ ಷೋ

Published:
Updated:
ಹೊಸಕೋಟೆ: ಕಾಂಗ್ರೆಸ್‌, ಬಿಜೆಪಿ ರೋಡ್ ಷೋ

ಹೊಸಕೋಟೆ: ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಹೊಸಕೋಟೆ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಗುರುವಾರ ರೋಡ್ ಷೋ ನಡೆಸಿದರು.

ಮಧ್ಯಾಹ್ನ 11ಕ್ಕೆ ಗಂಗಮ್ಮನ ಗುಡಿ ರಸ್ತೆಯಿಂದ ಹೊರಟ ಬಿಜೆಪಿ ಮೆರವಣಿಗೆಗೆ ಕೇಂದ್ರ ಸಚಿವ ಅರ್ಜುನ್ ರಾಮ್ ಪಾಲ್ ಮೆಗ್ವಾಲ್ ಸಾಥ್ ನೀಡಿದರು. ಅವರು ಮಾತನಾಡಿ, ‘ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರವಿದ್ದಾಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ’ ಎಂದರು.

ಪಕ್ಷದ ಅಭ್ಯರ್ಥಿ ಶರತ್ ಬಚ್ಚೇಗೌಡ ಮಾತನಾಡಿ, ‘ಚುನಾವಣೆಯಲ್ಲಿ ಗೆಲವು ನಮ್ಮದೇ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಖಂಡ ಬಿ.ಎನ್.ಬಚ್ಚೇಗೌಡ ಇದ್ದರು.

ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಕಾಂಗ್ರೆಸ್ ಪಕ್ಷದವರು ಪಕ್ಷದ ಕಚೇರಿಯಿಂದ ಹೊರಟು ಪಟ್ಟಣದ ಮುಖ್ಯ ಬೀದಿಗಳಲ್ಲಿ ರೋಡ್ ಷೋ ನಡೆಸಿದರು. ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಕೃಷ್ಣಬೈರೇಗೌಡ ಮೆರವಣಿಗೆಗೆ ಸಾಥ್ ನೀಡಿದರು.

ಅವರು ಮಾತನಾಡಿ, ‘ರಾಜ್ಯ ಸರ್ಕಾರ ಭ್ರಷ್ಟಾಚಾರ ಮತ್ತು ಹಗರಣಗಳ ಮುಕ್ತ ಸರ್ಕಾರವಾಗಿದ್ದು 5 ವರ್ಷ ಸುಭದ್ರ ಸರ್ಕಾರ ನೀಡಿದೆ. ಜೊತೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಹಸಿವು ಮುಕ್ತ ಕರ್ನಾಟಕವನ್ನು ನಿರ್ಮಾಣಮಾಡಿದೆ’ಎಂದರು. ‘ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆಯಿದ್ದು ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವುದು ಶತಸಿದ್ಧ’ ಎಂದು ಹೇಳಿದರು. ಅಭ್ಯರ್ಥಿ ಎನ್.ನಾಗರಾಜ್‌ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry