‘ಗೌರಿಗೆ ಸೂಕ್ತ ಭದ್ರತೆ ನೀಡಬೇಕಿತ್ತು’

7
ಚಲನಚಿತ್ರ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌

‘ಗೌರಿಗೆ ಸೂಕ್ತ ಭದ್ರತೆ ನೀಡಬೇಕಿತ್ತು’

Published:
Updated:
‘ಗೌರಿಗೆ ಸೂಕ್ತ ಭದ್ರತೆ ನೀಡಬೇಕಿತ್ತು’

ಶಿಕಾರಿಪುರ: ನಕ್ಸಲೈಟ್‌ಗಳನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಮಾಡಿದ್ದ ಗೌರಿ ಲಂಕೇಶ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ಭದ್ರತೆ ನೀಡಬೇಕಿತ್ತು ಎಂದು ಚಲನಚಿತ್ರ ನಿರ್ದೇಶಕ, ಗೌರಿಯ ತಮ್ಮ ಇಂದ್ರಜಿತ್‌ ಲಂಕೇಶ್‌ ಪುನರುಚ್ಚರಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಹತ್ಯೆಯ ನಂತರ ಆರೋಪಿಗಳನ್ನು ಪತ್ತೆಹಚ್ಚಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಬಲಪಂಥೀಯರು ಹತ್ಯೆ ಮಾಡಿದ್ದಾರೆ ಎಂದು ಹೇಳುವವರು ಸಾಕ್ಷಿ ನೀಡಬೇಕು’ ಎಂದರು.

ರಾಜ್ಯದ ಹೃದಯ ಭಾಗವಾದ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ ಅವರು, ಆರೋಪಿಗಳನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry