ವೈದ್ಯೆ ಮನೆ ಮೇಲೆ ಐಟಿ ದಾಳಿ: ಪತ್ರಕರ್ತನ ವಿಚಾರಣೆ

ಮಂಗಳೂರು: ನಗರದ ಬೋಳಾರದ ಮುಳಿಹಿತ್ಲುವಿನಲ್ಲಿ ಗುರುವಾರ ತಡರಾತ್ರಿ ವೈದ್ಯೆಯೊಬ್ಬರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಮನೆಯಲ್ಲಿದ್ದ ಪತ್ರಕರ್ತರೊಬ್ಬರನ್ನೂ ವಿಚಾರಣೆ ನಡೆಸಿದ್ದಾರೆ.
ಚುನಾವಣಾ ಅಕ್ರಮ ತಡೆಗೆ ಕಾರ್ಯಾಚರಣೆ ನಡೆಸುತ್ತಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿಶೇಷ ತಂಡ ಈ ದಾಳಿ ನಡೆಸಿದೆ. ಮನೆಯಲ್ಲಿದ್ದ ವೈದ್ಯೆ, ಅವರ ಪತಿ ಮತ್ತು ಪತ್ರಕರ್ತರೊಬ್ಬರನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ಬಿಗಿ ಭದ್ರತೆಯಲ್ಲಿ ಕಾರ್ಯಾಚರಣೆ ನಡೆದಿದೆ. ವೈದ್ಯೆಯ ಮನೆಯಿಂದ ಹಣ ಅಥವಾ ದಾಖಲೆಗಳನ್ನು ವಶಕ್ಕೆ ಪಡೆದ ಕುರಿತು ಐಟಿ ಅಧಿಕಾರಿಗಳಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.