ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಮತ್ತು ಆಪ್ತರ ಮನೆ ಮೇಲೆ ಐಟಿ ದಾಳಿ

6

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಮತ್ತು ಆಪ್ತರ ಮನೆ ಮೇಲೆ ಐಟಿ ದಾಳಿ

Published:
Updated:
ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಮತ್ತು ಆಪ್ತರ ಮನೆ ಮೇಲೆ ಐಟಿ ದಾಳಿ

ಕಾರವಾರ: ಇಲ್ಲಿನ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಅವರ ಆಪ್ತ ಮಂಗಲ್ ದಾಸ್ ಕಾಮತ್ ಎಂಬುವವರ ಮನೆಯ ಮೇಲೆ ಶುಕ್ರವಾರ ಬೆಳಿಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಂಕೋಲಾ ತಾಲ್ಲೂಕಿನ ಆವರ್ಸಾದಲ್ಲಿರುವ ಮಂಗಲದಾಸ್ ನಿವಾಸದಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಸತೀಶ್ ಸೈಲ್ ಅವರ ಸದಾಶಿವಗಡ ನಿವಾಸಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದರು.

ಬೆಂಗಳೂರು ಹಾಗೂ ಹುಬ್ಬಳ್ಳಿ ಆದಾಯ ತೆರಿಗೆ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry