ಮಂಗಳವಾರ, ಮಾರ್ಚ್ 9, 2021
18 °C

ಕೊರಟಗೆರೆ ವಿಧಾನಸಭಾ ಕ್ಷೇತ್ರ: ಉಪಹಾರ ಇಲ್ಲದ್ದಕ್ಕೆ ಚುನಾವಣಾ ಸಿಬ್ಬಂದಿ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರಟಗೆರೆ ವಿಧಾನಸಭಾ ಕ್ಷೇತ್ರ: ಉಪಹಾರ ಇಲ್ಲದ್ದಕ್ಕೆ ಚುನಾವಣಾ ಸಿಬ್ಬಂದಿ ಆಕ್ರೋಶ

ತುಮಕೂರು: ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ ಮಸ್ಟರಿಂಗ್ ಕೇಂದ್ರದಿಂದ ತೆರಳುವ ಮುನ್ನ ಉಪಹಾರ ಇಲ್ಲದೇ ಪರದಾಡಿದರು. ಉಪಹಾರ ವ್ಯವಸ್ಥೆ ಮಾಡುವಲ್ಲಿನ ಲೋಪ ಖಂಡಿಸಿ ಚುನಾವಣಾಧಿಕಾರಿ ವಿರುದ್ಧ ಘೋಷಣೆ ಕೂಗಿದರು.

ಮತಗಟ್ಟೆಗೆ ತೆರಳಲು ಸಜ್ಜಾದ ಸಿಬ್ಬಂದಿ

ಚಿತ್ರದುರ್ಗ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿ ಇಲ್ಲಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಜಮಾಯಿಸಿದ್ದಾರೆ.

ಇವಿಎಂ ಯಂತ್ರದೊಂದಿಗೆ ಮತಗಟ್ಟೆಗಳಿಗೆ ತೆರಳಲು ಸಜ್ಜಾಗಿದ್ದಾರೆ. ಮತಗಟ್ಟೆಗೆ ತೆರಳುವ ಮಾರ್ಗ ಹಾಗೂ ಇತರ ಮಾಹಿತಿಯನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಪಿಆರ್ ಓ, ಎಪಿಆರ್ ಓ ಹಾಗೂ ಮೂವರು ಸಿಬ್ಬಂದಿಗಳನ್ನು ಪ್ರತಿ ಮತಗಟ್ಟೆ ನಿಯೋಜಿಸಲಾಗಿದೆ. ಜೊತೆಗೆ ಪೊಲೀಸ್ ಸಿಬ್ಬಂದಿಯೂ ಇರಲಿದ್ದಾರೆ.

ದಾವಣಗೆರೆ


ದಾವಣಗೆರೆ: ಇಲ್ಲಿನ ಮೋತಿವೀರಪ್ಪ ಶಾಲೆಯ ಮೈದಾನದಲ್ಲಿ ಶುಕ್ರವಾರ ಮಸ್ಟರಿಂಗ್ ಕಾರ್ಯ ನಡೆಯಿತು.
ಚುನಾವಣಾ ಕರ್ತವ್ಯಕ್ಕೆ ನಿಯೋಜಿತಗೊಂಡಿದ್ದ ಸಿಬ್ಬಂದಿ ಚುನಾವಣಾ ಪರಿಕರಗಳನ್ನು ಪಡೆದುಕೊಂಡು ಸಂಬಂಧಪಟ್ಟ ಮತಗಟ್ಟೆಗಳತ್ತ ತೆರಳಿದರು.
ಡಿಆರ್ ಆರ್ ಕಾಲೇಜು ಹಾಗೂ ಯುಬಿಡಿಟಿ ಕಾಲೇಜುಗಳಲ್ಲೂ ಮಸ್ಟರಿಂಗ್ ಕಾರ್ಯ ನಡೆಯುತ್ತಿದೆ.

ಯಾದಗಿರಿ

ಯಾದಗಿರಿ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಚುನಾವಣಾ ಸಿಬ್ಬಂದಿ ಮತಯಂತ್ರ ವಿತರಣೆ ವೇಳೆ ಮಾಹಿತಿ ಪಡೆದರು.

ರಾಮನಗರ


ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಮಸ್ಟರಿಂಗ್ ಪ್ರಕ್ರಿಯೆ ಆರಂಭಗೊಂಡಿತು. ಇವಿಎಂ ಯಂತ್ರಗಳು, ವಿ.ವಿ. ಪ್ಯಾಟ್ ಹಾಗು ಅಗತ್ಯ ಸಾಮಗ್ರಿಗಳನ್ನು ಚುನಾವಣಾ ಸಿಬ್ಬಂದಿಗೆ ನೀಡಲಾಗುತ್ತಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ಅವರಿಗಾಗಿ ವಾಹನಗಳನ್ನು ಮೀಸಲಿರಿಸಲಾಗಿದೆ.

ಚಿಕ್ಕಮಗಳೂರು

ಚಿಕ್ಕಮಗಳೂರು: ಮತಕೇಂದ್ರಗಳಿಗೆ ತೆರಳಲು ಚುನಾವಣಾ ಸಿಬ್ಬಂದಿಗೆ ನಗರದ ಐಡಿಎಸ್ ಜಿ ಕಾಲೇಜಿನಲ್ಲಿ ಮತಯಂತ್ರ, ಪರಿಕರಗಳ ವಿತರಣೆ ಪ್ರಕ್ರಿಯೆ ನಡೆಯುತ್ತಿದೆ.

ಮತಗಟ್ಟೆಗಳಿಗೆ ತೆರಳಲು ಸಿಬ್ಬಂದಿ ಸಿದ್ಧತೆ

ಬೆಳಗಾವಿ: ವಿಧಾನಸಭಾ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಸಿಬ್ಬಂದಿ ಇಲ್ಲಿನ ಸರ್ದಾರ್ ಪ್ರೌಢಶಾಲೆ ಆವರಣದಲ್ಲಿ ನೆರೆದಿದ್ದಾರೆ.

ಇವಿಎಂಗಳನ್ನು ಒಯ್ಯಲು ಬಂದಿರುವ ಅವರು ವಾಹನ, ಮಾರ್ಗ ಹಾಗೂ ವಾಹನದ ವ್ಯವಸ್ಥೆಯ ಮಾಹಿತಿ ಪಡೆಯುತ್ತಿದ್ದಾರೆ. ಮತಗಟ್ಟೆಗಳಿಗೆ ಹೊರಡಲು ಸಜ್ಜಾಗುತ್ತಿದ್ದಾರೆ.

ಮಂಗಳೂರು

ಮಂಗಳೂರು: ಇಲ್ಲಿನ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಿಬ್ಬಂದಿ ಹಂಚಿಕೆ ಕಾರ್ಯ ನಗರದ ರೊಸಾರಿಯೋ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯುತ್ತಿದೆ. ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ಸಿಬ್ಬಂದಿ ಮತಯಂತ್ರ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಪಡೆದು ಮತಗಟ್ಟೆಗಳಿಗೆ ತೆರಳಲು ಸಜ್ಜಾಗುತ್ತಿದ್ದಾರೆ.

ಪ್ರತಿ‌ ಮತಗಟ್ಟೆಗೆ ಒಬ್ಬ ಅಧ್ಯಕ್ಷಾಧಿಕಾರಿ, ಒಬ್ಬ ಸಹಾಯಕ ಅಧ್ಯಕ್ಷಾಧಿಕಾರಿ ಮತ್ತು ಮೂವರು ಸಿಬ್ಬಂದಿಯನ್ನು ಹಂಚಿಕೆ‌ಮಾಡಲಾಗಿದೆ.
ಚುನಾವಣಾ ಸಿಬ್ಬಂದಿ, ಪೊಲೀಸರು, ಅರೆ ಸೇನಾ‌ಪಡೆ, ಗೃಹರಕ್ಷಕ ದಳ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿಗೆ ಕಾಲೇಜಿನ ಆವರಣದಲ್ಲಿ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.