ಶುಕ್ರವಾರ, ಫೆಬ್ರವರಿ 26, 2021
19 °C

ಸಂವೇದಿ ಸೂಚ್ಯಂಕ ಚೇತರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಸಂವೇದಿ ಸೂಚ್ಯಂಕ ಚೇತರಿಕೆ

ಮುಂಬೈ: ಜಾಗತಿಕ ವಿದ್ಯಮಾನಗಳ ಸಕಾರಾತ್ಮಕ ಬೆಳವಣಿಗೆಯ ಪರಿಣಾಮವಾಗಿ ಶುಕ್ರವಾರ ಷೇರುಪೇಟೆಗಳ ವಹಿವಾಟಿನಲ್ಲಿ ಚೇತರಿಕೆ ಕಂಡು ಬಂದಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 289 ಅಂಶ ಏರಿಕೆ ಕಂಡು 35,535 ಅಂಶಗಳಲ್ಲಿ ವಹಿವಾಟು ಅಂತ್ಯ ಕಂಡಿದೆ. ನಿಫ್ಟಿ 90 ಅಂಶ ಹೆಚ್ಚಾಗಿ 10,812 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ಎರಡೂ ಸೂಚ್ಯಂಕಗಳ ವಹಿವಾಟಿನ ಅಂತ್ಯವು ಫೆಬ್ರುವರಿ 1ರ ನಂತರದ ಅತ್ಯಂತ ಗರಿಷ್ಠ ಮಟ್ಟವಾಗಿದೆ. ಕಚ್ಚಾ ತೈಲ ದರ ಏರಿಕೆ ಮತ್ತು ರೂಪಾಯಿ ಮೌಲ್ಯ ಕುಸಿತವು ಮುಂದಿನ ದಿನಗಳಲ್ಲಿ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.