ಜೆರಾಕ್ಸ್‌ ಅಂಗಡಿಯಲ್ಲಿ ಗುರುತಿನ ಚೀಟಿ ಪತ್ತೆ: ಒಬ್ಬನ ವಿಚಾರಣೆ

7

ಜೆರಾಕ್ಸ್‌ ಅಂಗಡಿಯಲ್ಲಿ ಗುರುತಿನ ಚೀಟಿ ಪತ್ತೆ: ಒಬ್ಬನ ವಿಚಾರಣೆ

Published:
Updated:

ದಾವಣಗೆರೆ: ಇಲ್ಲಿನ ಎವಿಕೆ ಕಾಲೇಜು ರಸ್ತೆಯಲ್ಲಿರುವ ಜೆರಾಕ್ಸ್‌ ಸೆಂಟರ್‌ನಲ್ಲಿ ಮತದಾರರ ಗುರುತಿನ ಚೀಟಿ ಮುದ್ರಿಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ಶುಕ್ರವಾರ ಪೊಲೀಸರು ದಾಳಿ ನಡೆಸಿದರು.

ಹರಪನಹಳ್ಳಿ ತಾಲ್ಲೂಕಿನ ಚಿಕ್ಕಮೇಗಳಗೆರೆ ಗ್ರಾಮದ ಕೆಲವು ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿವೆ. ಈ ಸಂಬಂಧ ಜೆರಾಕ್ಸ್‌ ಅಂಗಡಿಯ ಕೆಲಸಗಾರನನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಲ್ಯಾಮಿನೇಷನ್‌ ಮಾಡಿಸಲು ಜೆರಾಕ್ಸ್‌ ಅಂಗಡಿಗೆ ಬಂದಿದ್ದಾಗಿ ವ್ಯಕ್ತಿ ಹೇಳಿಕೆ ನೀಡಿದ್ದಾನೆ. ಅಕ್ರಮ ಕಂಡುಬಂದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಚೇತನ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry