ಕೋರ್ಟ್‌ಗಳಲ್ಲಿ ಲೈಂಗಿಕ ಕಿರುಕುಳ ತಡೆ ಸಮಿತಿ ರಚನೆಗೆ 2 ತಿಂಗಳ ಗಡುವು

7

ಕೋರ್ಟ್‌ಗಳಲ್ಲಿ ಲೈಂಗಿಕ ಕಿರುಕುಳ ತಡೆ ಸಮಿತಿ ರಚನೆಗೆ 2 ತಿಂಗಳ ಗಡುವು

Published:
Updated:
ಕೋರ್ಟ್‌ಗಳಲ್ಲಿ ಲೈಂಗಿಕ ಕಿರುಕುಳ ತಡೆ ಸಮಿತಿ ರಚನೆಗೆ 2 ತಿಂಗಳ ಗಡುವು

ನವದೆಹಲಿ: ದೇಶದ ನ್ಯಾಯಾಲಯಗಳಲ್ಲಿ ‘ಲೈಂಗಿಕ ಕಿರುಕುಳ ತಡೆ ಸಮಿತಿ’ಯನ್ನು ಎರಡು ತಿಂಗಳ ಒಳಗಾಗಿ ರಚಿಸುವಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಎಲ್ಲ ಹೈಕೋರ್ಟ್‌ಗಳಿಗೆ ಸೂಚನೆ ನೀಡಿದೆ.

ಸಮಿತಿ ರಚಿಸಲು ದೆಹಲಿಯ ಹೈಕೋರ್ಟ್‌ ಮತ್ತು ಜಿಲ್ಲಾ ನ್ಯಾಯಾಲಯಗಳಿಗೆ ಮಾತ್ರ ಒಂದು ವಾರದ ಗಡುವು ನೀಡಲಾಗಿದೆ.

ಕೆಲಸದ ಸ್ಥಳಗಳಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ಲೈಂಗಿಕ ಕಿರುಕುಳ ತಡೆ ಕಾಯ್ದೆ–2013ರ ಅನ್ವಯ ದೂರುಗಳ ವಿಚಾರಣೆಗೆ ಸಮಿತಿ ರಚನೆ ಅಗತ್ಯ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.

ಪ್ರತಿಭಟನಾನಿರತ ವಕೀಲರ ಗುಂಪೊಂದು ತಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಿ ವಕೀಲೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಸಂಧಾನಕ್ಕೆ ಸಲಹೆ: ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ವಕೀಲೆ ಮತ್ತು ವಕೀಲರ ಸಂಘದ ಪದಾಧಿಕಾರಿಗಳಿಗೆ ಕೋರ್ಟ್‌ ಸಲಹೆ ಮಾಡಿದೆ.

ವಕೀಲರ ವಿರುದ್ಧ ವಕೀಲೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯನ್ನು ಪಟಿಯಾಲಾ ಹೌಸ್‌ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry