ಕಲ್ಲು ತೂರಾಟ ಪ್ರಕರಣ: ಪರಸ್ಪರ ದೂರು ದಾಖಲು2222

7

ಕಲ್ಲು ತೂರಾಟ ಪ್ರಕರಣ: ಪರಸ್ಪರ ದೂರು ದಾಖಲು2222

Published:
Updated:

ಸುರಪುರ: ಸಮೀಪದ ಪೇಠಮ್ಮಾಪುರ ಗ್ರಾಮದಲ್ಲಿ ಗುರುವಾರ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಸಲಾದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಗುರುವಾರ ತಡರಾತ್ರಿ ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರು ಸುರಪುರ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವತಃ ಪ್ರಕರಣ ದಾಖಲಿಸಿಕೊಂಡು ಎರಡೂ ಪಕ್ಷಗಳ 30 ಜನರನ್ನು ಬಂಧಿಸಿದ್ದರು. ಕಾಂಗ್ರೆಸ್‌ನವರು 25 ಜನರ ಮೇಲೆ ಮತ್ತು ಬಿಜೆಪಿಯವರು 15 ಜನರ ಮೇಲೆ ದೂರು ದಾಖಲಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಯಾರನ್ನೂ ಬಂಧಿಸಿಲ್ಲ.

ಗ್ರಾಮದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry