ಮತಗಟ್ಟೆಯಲ್ಲಿ ಹೃದಯಾಘಾತದಿಂದ ನಿಧನ

7

ಮತಗಟ್ಟೆಯಲ್ಲಿ ಹೃದಯಾಘಾತದಿಂದ ನಿಧನ

Published:
Updated:

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ‌ಅಂಡಿಂಜೆ ಮತಗಟ್ಟೆಗೆ ಶನಿವಾರ ಬೆಳಿಗ್ಗೆ ಮತದಾನಕ್ಕೆ ಬಂದಿದ್ದ ಸಮೀಪದ ಜಾರಿಗೆದಡಿ ನಿವಾಸಿ ಅಣ್ಣಿ ಆಚಾರ್ಯ (70) ಎಂಬುವವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರು ತಮ್ಮ‌ ಮಗನೊಂದಿಗೆ ಮತಗಟ್ಟೆಗೆ ಬಂದಿದ್ದರು. ಮತದಾನ ಕೇಂದ್ರದ ಆವರಣದಲ್ಲಿ ನಿಂತಿದ್ದಾಗ ಹೃದಯಾಘಾತದಿಂದ ಕುಸಿದುಬಿದ್ದರು. ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸುತ್ತಿರುವಾಗಲೇ ಮೃತಪಟ್ಟರು. ಮತದಾನಕ್ಕೂ ಮೊದಲೇ ಅವರು ನಿಧನರಾದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry