ಮತಗಟ್ಟೆಗಳಲ್ಲಿ ತುರ್ತು ಚಿಕಿತ್ಸಾ ಸೌಲಭ್ಯ

7

ಮತಗಟ್ಟೆಗಳಲ್ಲಿ ತುರ್ತು ಚಿಕಿತ್ಸಾ ಸೌಲಭ್ಯ

Published:
Updated:

ಬಳ್ಳಾರಿ: ಜಿಲ್ಲೆಯ ಎಲ್ಲ ಒಂಬತ್ತು ವಿಧಾನಸಭಾ ಕ್ಷೇತ್ರಗಳ 2,127 ಮತಗಟ್ಟೆಗಳಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ರಮೇಶಬಾಬು ತಿಳಿಸಿದ್ದಾರೆ.

ಮತಗಟ್ಟೆಗಳಿಗೆ ಅಗತ್ಯ ಔಷಧಿಗಳ ಕಿಟ್‌ಗಳನ್ನು ವಿತರಿಸಲಾಗಿದೆ. ಹೆಚ್ಚುವರಿಯಾಗಿ ಶೇ 10ರಷ್ಟು ಕಿಟ್‌ಗಳನ್ನು ಆಯಾ ಕ್ಷೇತ್ರದ ಚುನಾವಣಾಧಿಕಾರಿಗೆ ನೀಡಲಾಗಿದೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಅವರ ವ್ಯಾಪ್ತ್ತಿಯ ಮತಗಟ್ಟೆಗಳಿಗೆ ನಿರಂತರವಾಗಿ ಭೇಟಿ ನೀಡುತ್ತಾರೆ. ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತದಾನ ಅವಧಿ ಮುಗಿಯುವವರೆಗೂ ಅಗತ್ಯ ಔಷಧಿಗಳೊಂದಿಗೆ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಎಲ್ಲಾ ಮಸ್ಟರಿಂಗ್ ಕೇಂದ್ರಗಳಿಗೆ ತುರ್ತು ಚಿಕಿತ್ಸಾ ವಾಹನಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 51 ವಾಹನಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry