ಸಾಮೂಹಿಕ ಅತ್ಯಾಚಾರ ಸಂತ್ರಸ್ತರಿಗೆ ₹10 ಲಕ್ಷದವರೆಗೂ ಆರ್ಥಿಕ ನೆರವು

ನವದೆಹಲಿ: ದೇಶದ ಯಾವುದೇ ಭಾಗದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರಿಗೆ ₹5 ಲಕ್ಷದಿಂದ ₹10 ಲಕ್ಷದವರೆಗೆ ಪರಿಹಾರ ನೀಡುವ ಯೋಜನೆಗೆ ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ಎನ್‌ಎಎಲ್‌ಎಸ್‌ಎ)ಯೋಜನೆಗೆ ನ್ಯಾಯಮೂರ್ತಿಗಳಾದ ಮದನ್ ಬಿ.ಲೋಕೂರ್ ಹಾಗೂ ದೀಪಕ್ ಗುಪ್ತಾ ಅವರ ಪೀಠ ಒಪ್ಪಿಗೆ ಸೂಚಿಸಿದೆ.
‘ಲೈಂಗಿಕ ದೌರ್ಜನ್ಯಕ್ಕೆ ಗುರಿಯಾದ ಸಂತ್ರಸ್ತರ ಪರಿಹಾರ ಯೋಜನೆ–2018’ ಪ್ರಕಾರ, ಅತ್ಯಾಚಾರ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಮತ್ತು ಆ್ಯಸಿಡ್ ದಾಳಿಗೆ ತುತ್ತಾದ ಸಂತ್ರಸ್ತರಿಗೆ ಕನಿಷ್ಠ ₹4 ಲಕ್ಷದಿಂದ ಗರಿಷ್ಠ ₹7 ಲಕ್ಷದವರೆಗೆ ಪರಿಹಾರ ದೊರಕಲಿದೆ.
ದೇಶದ ಎಲ್ಲ ಭಾಗಗಳಿಗೂ ಇದು ಅನ್ವಯವಾಗಲಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಇದಕ್ಕಿಂತ ಹೆಚ್ಚಿನ ಪರಿಹಾರ ನೀಡುವುದಾದರೆ ಅದಕ್ಕೆ ಎನ್‌ಎಎಲ್‌ಎಸ್‌ಎ ಅಡ್ಡಿಪಡಿಸುವುದಿಲ್ಲ ಎಂದು ಕೋರ್ಟ್ ಹೇಳಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.