ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ಕಡೆ ಮತದಾನ ಬಹಿಷ್ಕಾರ; ಮನವೊಲಿಕೆ

Last Updated 12 ಮೇ 2018, 19:30 IST
ಅಕ್ಷರ ಗಾತ್ರ

ಹೊಸಪೇಟೆ/ ಬೆಳಗಾವಿ: ಮೂಲಸೌಕರ್ಯಕ್ಕೆ ಆಗ್ರಹಿಸಿ ಹಾಗೂ ಗರ್ಭಿಣಿಯ ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಕ್ರಮವಾಗಿ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಕಮಲಾಪುರ ಕೆರೆ ತಾಂಡಾ ಹಾಗೂ ಬೆಳಗಾವಿ ಜಿಲ್ಲೆಯ ಹೊಗರ್ತಿಯಲ್ಲಿ ಗ್ರಾಮಸ್ಥರು ಶನಿವಾರ ಕೆಲ ತಾಸು ಮತದಾನ ಬಹಿಷ್ಕರಿಸಿದ್ದರು.

ಚುನಾವಣಾಧಿಕಾರಿಗಳು ಮನವೊಲಿಸಿದ ನಂತರ, ಮಧ್ಯಾಹ್ನ 2 ಗಂಟೆ ನಂತರ ತಾಂಡಾದಲ್ಲಿ ಮತದಾನ ಆರಂಭವಾಯಿತು. ಇಲ್ಲಿ 787 ಮತದಾರರಿದ್ದಾರೆ. ನಂತರ ಹೊಗರ್ತಿಯಲ್ಲಿಯೂ ಮತದಾನ ಮಾಡಿದರು.

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಹಾವೇರಿ: ಬ್ಯಾಡಗಿ ವಿಧಾನಸಭಾ ಕ್ಷೇತ್ರದ ದೇವಗಿರಿ ಮತಗಟ್ಟೆಯಲ್ಲಿ ಸರದಿಯಲ್ಲಿ ನಿಂತಿದ್ದ ಪಾರವ್ವ ಅರ್ಕಸಾಲಿ ಎಂಬ ಮಹಿಳೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಭದ್ರತಾ ಸಿಬ್ಬಂದಿ ತಕ್ಷಣವೇ ಧಾವಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ. ಆ ಬಳಿಕ, ಚುನಾವಣಾಧಿಕಾರಿಗಳು ಮನವೊಲಿಸಿದ್ದರಿಂದ ಆ ಮಹಿಳೆ ಮತ ಚಲಾಯಿಸಿ ಮನೆಗೆ ಮರಳಿದರು.

ಕೌಟುಂಬಿಕ ಗೊಂದಲದಿಂದಾಗಿ ಹಾಗೂ ತಮಗೆ ಕೆಲವು ಸರ್ಕಾರಿ ಸೌಲಭ್ಯಗಳು ಸಿಕ್ಕಿಲ್ಲವೆಂದು ನೊಂದು ಆತ್ಮಹತ್ಯೆಗೆ ಮುಂದಾಗಿದ್ದಾಗಿ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT