ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್, ಕಾಂಗ್ರೆಸ್ ಘರ್ಷಣೆ; ನಾಲ್ವರಿಗೆ ಗಾಯ

Last Updated 12 ಮೇ 2018, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಬಿಳಕಿ ತಾಂಡದಲ್ಲಿ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿದೆ.

ಮತದಾನ ಕೇಂದ್ರಕ್ಕೆ ಮತದಾರರನ್ನು ಕರೆದುಕೊಂಡು ಬರುತ್ತಿದ್ದ ವಾಹನವನ್ನು ಜೆಡಿಎಸ್ ಕಾರ್ಯಕರ್ತರು ತಡೆದಿದ್ದು, ಅದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಗ ಎರಡು ಗುಂಪುಗಳ ಮಧ್ಯೆ ವಾಗ್ವಾದ ನಡೆದಿದೆ. ನಾಲ್ವರು ಜೆಡಿಎಸ್ ಕಾರ್ಯಕರ್ತರು ಗಾಯಗೊಂಡಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಗರ ತಾಲ್ಲೂಕು ತ್ಯಾಗರ್ತಿ ಸಮೀಪದ ಕೋಟೆಕೊಪ್ಪ ಮತಗಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತಹಾಕಿದರೂ ಬೀಪ್ ಶಬ್ದ ಬರುತ್ತಿಲ್ಲ. ಕೇಳಿದರೆ ಮತಗಟ್ಟೆ ಸಿಬ್ಬಂದಿ ಯಾವುದಾದರೂ ಒಂದು ಬಟನ್ ಒತ್ತಿ ಎನ್ನುತ್ತಾರೆ ಎಂದು ಆರೋಪಿಸಿ ಗಲಾಟೆ ಮಾಡಿದ್ದಾರೆ. ಕೊನೆಗೆ ಸ್ಥಳಕ್ಕೆ ಬಂದ ಅಭ್ಯರ್ಥಿ ಹರತಾಳು ಹಾಲಪ್ಪ ಅವರು ಚುನಾವಣಾಧಿಕಾರಿಗೆ ದೂರು ನೀಡಿದ ನಂತರ ಯಂತ್ರ ಬದಲಿಸಲಾಯಿತು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಮಂಗೋಟೆ ಕ್ಯಾಂಪ್‌ನ 50ಕ್ಕೂ ಹೆಚ್ಚು ಕುಟುಂಬಗಳು ಮೂಲ ಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ್ದರು. ಅಧಿಕಾರಿಗಳ ಭರವಸೆಯ ನಂತರ ಮತದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT