ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಗಟ್ಟೆ ಸಮೀಕ್ಷೆ: ಬಿಜೆಪಿ ಮುನ್ನಡೆ?

Last Updated 12 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ವಿಧಾನಸಭೆಗೆ ಶನಿವಾರ ನಡೆದ ಮತದಾನದ ಬೆನ್ನಲ್ಲೇ ಹೊರಬಿದ್ದ ಹೆಚ್ಚಿನ ಮತಗಟ್ಟೆ ಅಥವಾ ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಭವಿಷ್ಯ ನುಡಿದಿವೆ.

ರಾಷ್ಟ್ರೀಯ ಸುದ್ದಿವಾಹಿನಿಗಳಾದ ರಿಪಬ್ಲಿಕ್‌ ಟಿವಿ, ಟೈಮ್ಸ್‌ –ಚಾಣಕ್ಯ, ಎನ್‌ಡಿಟಿವಿ ಮತ್ತು ಸಿ–ವೋಟರ್‌ ಸಂಸ್ಥೆ ನಡೆಸಿದ ಸಮೀಕ್ಷೆಗಳು ಬಿಜೆಪಿಗೆ 100–120 ಸ್ಥಾನ ನೀಡಿವೆ.

ಇಂಡಿಯಾ ಟುಡೆ ಟಿ.ವಿ, ಆಕ್ಸಿಸ್‌ ಮೈ ಇಂಡಿಯಾ ಸಂಸ್ಥೆಗಳ ಸಮೀಕ್ಷೆಗಳು ಕಾಂಗ್ರೆಸ್‌ 106 ರಿಂದ 118 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ.

ಹೆಚ್ಚಿನ ಸಮೀಕ್ಷೆಗಳು ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಿಲ್ಲವಾದರೂ, 26–38 ಕ್ಷೇತ್ರಗಳಲ್ಲಿ ಜಯ ಸಾಧಿಸಲಿರುವ ಜೆಡಿಎಸ್‌ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು  ಹೇಳಿವೆ.

ಇನ್ನೂ ಕೆಲವು ಸಂಸ್ಥೆಗಳು ಮತ್ತು ರಾಷ್ಟ್ರೀಯ ಸುದ್ದಿವಾಹಿನಿಗಳು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಸಮಬಲದ ಪೈಪೋಟಿ ಏರ್ಪಟ್ಟಿದೆ ಎಂದು ವಿಶ್ಲೇಷಿಸಿವೆ. ಮೇ 15ರಂದು ಅಂತಿಮ ಫಲಿತಾಂಶ ಹೊರಬೀಳಲಿದೆ.

* ಕಾಂಗ್ರೆಸ್‌ ಪಕ್ಷವೇ ಮತ್ತೆ ಗೆಲ್ಲುತ್ತದೆ. ನಾನೇ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗುತ್ತೇನೆ. ಮತದಾನೋತ್ತರ ಸಮೀಕ್ಷೆಯನ್ನು ನಂಬುವುದಿಲ್ಲ.

–ಸಿದ್ದರಾಮಯ್ಯ, ಮುಖ್ಯಮಂತ್ರಿ

* ಸ್ಥಾನಗಳನ್ನು ಗೆಲ್ಲುತ್ತೇವೆ. ಪ್ರಧಾನಿ ಮೋದಿ ಹಾಗೂ ಅಧ್ಯಕ್ಷ ಅಮಿತ್‌ ಶಾ ಅವರನ್ನು ಇದೇ 15 ರಂದು ಭೇಟಿಯಾಗಿ ಪ್ರಮಾಣ ವಚನಕ್ಕೆ ಆಹ್ವಾನಿಸುತ್ತೇನೆ.

–ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

* ಅತಂತ್ರ ಆಗುವುದಿಲ್ಲ. ನಾವೇ ಸರ್ಕಾರ ರಚಿಸುತ್ತೇವೆ. ಯಾರ ಮನೆ ಬಾಗಿಲಿಗೂ ನಾನು ಹೋಗುವುದಿಲ್ಲ. ಯಾರೂ ನನ್ನ ಮನೆ ಬಾಗಿಲಿಗೆ ಬರಬೇಕಿಲ್ಲ.

–ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT