ಗುರುವಾರ , ಮಾರ್ಚ್ 4, 2021
27 °C

ಯುವ ಕಾಂಗ್ರೆಸ್‌ಗೆ ಕೇಶವಚಂದ್ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯುವ ಕಾಂಗ್ರೆಸ್‌ಗೆ ಕೇಶವಚಂದ್ ಅಧ್ಯಕ್ಷ

ನವದೆಹಲಿ: ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಉತ್ತರಪ್ರದೇಶದ ಕೇಶವಚಂದ್‌ ಯಾದವ್‌ ಹಾಗೂ ಉಪಾಧ್ಯಕ್ಷರಾಗಿ ಕರ್ನಾಟಕದ ಭದ್ರಾವತಿಯ ಬಿ.ವಿ ಶ್ರೀನಿವಾಸ್‌ ಅವರನ್ನು ನೇಮಕ ಮಾಡಲಾಗಿದೆ.

ಇದುವರೆಗೆ ಪ್ರಧಾನ ಕಾರ್ಯದರ್ಶಿಗಳಾಗಿ ಕೆಲಸ ಮಾಡುತ್ತಿದ್ದ ಈ ಇಬ್ಬರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೊಸ ಜವಾಬ್ದಾರಿ ವಹಿಸಿದ್ದಾರೆ.

ಎರಡು ಬಾರಿ ಶಾಸಕರಾಗಿದ್ದ ಪಂಜಾಬ್‌ನ ಅಮರಿಂದರ್‌ ಸಿಂಗ್ ರಾಜ್‌ ಬಾರಾರ್ ಇದುವರೆಗೆ ಅಧ್ಯಕ್ಷರಾಗಿದ್ದರು. ಅವರ ಸ್ಥಾನಕ್ಕೆ ಯಾದವ್‌ ಅವರನ್ನು ನೇಮಕ ಮಾಡಲಾಗಿದೆ.

ಶ್ರೀನಿವಾಸ್ ಅವರು ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ನಂತರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಅವರನ್ನು ಮಧ್ಯಪ್ರದೇಶ ಹಾಗೂ ತೆಲಂಗಾಣ ಯುವ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಕ ಮಾಡಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.