ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 3ರಷ್ಟು ಮತದಾನ ಹೆಚ್ಚಳ

ಮತಯಂತ್ರ ಸೇರಿದ ಘಟನಾನುಘಟಿ ನಾಯಕರ ಭವಿಷ್ಯ
Last Updated 13 ಮೇ 2018, 6:25 IST
ಅಕ್ಷರ ಗಾತ್ರ

ಧಾರವಾಡ: ಮಳೆಯ ಆರ್ಭಟದ ನಡುವೆಯೂ ಜನರು ಉತ್ಸಾಹದಿಂದ ಮತ ಚಲಾಯಿಸಿದ್ದು, ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಶೇ 3 ರಷ್ಟು ಹೆಚ್ಚು ಮತದಾನವಾಗಿದೆ. ಹು–ಧಾ ಸೆಂಟ್ರಲ್‌ ಕ್ಷೇತ್ರದ ಜಗದೀಶ ಶೆಟ್ಟರ್‌, ಧಾರವಾಡ ಕ್ಷೇತ್ರದ ವಿನಯ ಕುಲಕರ್ಣಿ, ಕಲಘಟಗಿ ಕ್ಷೇತ್ರದ ಸಂತೋಷ ಲಾಡ್‌ ಸೇರಿದಂತೆ 98 ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ.

2013ರಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ 67.16ರಷ್ಟು ಮತದಾನವಾಗಿತ್ತು. ಆದರೆ, ಈ ಬಾರಿ ಶೇ 70.83ರಷ್ಟು ಮತದಾನವಾಗಿದೆ. ಗ್ರಾಮೀಣ ಭಾಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿರುವುದರಿಂದ ಮತದಾನದ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಏಳು ಕ್ಷೇತ್ರಗಳಲ್ಲಿ ಮತ ಕ್ಷೇತ್ರಗಳಲ್ಲಿ ಹುಬ್ಬಳ್ಳಿ ಧಾರವಾಡದ ಮೂರು ಮತಕ್ಷೇತ್ರಗಳನ್ನು ಹೊರತುಪಡಿಸಿದರೆ ಗ್ರಾಮೀಣ ಭಾಗ ಹೆಚ್ಚಿರುವ ಕ್ಷೇತ್ರಗಳಲ್ಲಿ ಶೇ 70ಕ್ಕೂ ಅಧಿಕ ಮತದಾನವಾಗಿದೆ.

ಜಿಲ್ಲೆಯಲ್ಲಿ ಒಟ್ಟು 14,79,450ರಲ್ಲಿ 10,46,425 ಮತದಾರರು ಮತ ಚಲಾಯಿಸಿದ್ದಾರೆ. ಅದರಲ್ಲಿ, 5,48,578 ಪುರುಷರು, 4,97,847 ಮಹಿಳೆಯರು ಮತದಾನದಲ್ಲಿ ಭಾಗಿಯಾಗಿದ್ದರು. ಜಿಲ್ಲೆಯಲ್ಲಿ ಕಲಘಟಗಿ (ಶೇ 78.87) ಅತಿ ಹೆಚ್ಚು ಮತದಾನವಾಗಿದ್ದಾರೆ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ (ಶೇ 60.17) ದಲ್ಲಿ ಅತಿ ಕಡಿಮೆ ಮತದಾನವಾಗಿದೆ. ಜಿಲ್ಲಾ ಸ್ವೀಪ್‌ ಸಮಿತಿಯು ಮತದಾನ ಹೆಚ್ಚಳಕ್ಕೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.

ಹುಬ್ಬಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆಯಾದರೂ ಸೆಂಟ್ರಲ್‌ ಹಾಗೂ ಪೂರ್ವ ಕೇಂದ್ರಗಳಲ್ಲಿ ಮತದಾನದ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೆಚ್ಚಾಗಿರುವ ಮತದಾನ ಪ್ರಮಾಣದ ಲಾಭ ಯಾರಿಗೆ ಆಗಲಿದೆ ಎನ್ನುವ ಲೆಕ್ಕಾಚಾರ ಆರಂಭವಾಗಿದೆ. ಅಭ್ಯರ್ಥಿಗಳು ಮತಗಟ್ಟೆವಾರು ಪಟ್ಟಿ ತರಿಸಿ ಲೆಕ್ಕ ಹಾಕುವುದರಲ್ಲಿ ನಿರತರಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸ್ವೀಪ್‌ ಸಮಿತಿ ಅಧ್ಯಕ್ಷ ಸ್ನೇಹಲ್ ರಾಯಮಾನೆ, ‘ಸಖಿ ಮತಗಟ್ಟೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೈಕಲ್ ಜಾಥಾ, ಮ್ಯಾರಥಾನ್ ಸೇರಿದಂತೆ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳು ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ’ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT