ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್‍ಗೆ ಬಿಟ್ಟದ್ದು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ

7

ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್‍ಗೆ ಬಿಟ್ಟದ್ದು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ

Published:
Updated:
ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್‍ಗೆ ಬಿಟ್ಟದ್ದು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ಜೆಡಿಎಸ್ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತದಾರರಿಗೆ ಧನ್ಯವಾದಗಳನ್ನು ಹೇಳಿದ ಅವರು, ಅತಂತ್ರ ವಿಧಾನಸಭೆ ರಚನೆ ಆಗುವುದಿಲ್ಲ. ನಾವೇ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಎಕ್ಸಿಟ್ ಪೋಲ್ ಅಂದಾಜು ಒಂದಕ್ಕಿಂತ ಒಂದು ಭಿನ್ನವಾಗಿವೆ. ನಮ್ಮ ಕರಾರುವಾಕ್ಕು ಅಂದಾಜಿನ ಪ್ರಕಾರ ನಾವು 113 ಸಂಖ್ಯೆ ದಾಟುತ್ತೇವೆ.  ಎಲ್ಲವೂ 15ರ ಸಿಎಲ್‍ಪಿ ಸಭೆಯಲ್ಲಿ ಆಖೈರು ಆಗಲಿದೆ. ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು. 15 ರ ಸಂಜೆ ಕಳೆಯಲಿ, ಎಲ್ಲದಕ್ಕೂ ಉತ್ತರ ಸಿಗಲಿ ಎಂದಿದ್ದಾರೆ ಪರಮೇಶ್ವರ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry