ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲ ಕೊಟ್ಟ ‘ಸ್ವೀಪ್’ ಕಾರ್ಯಕ್ರಮ

ಉಡುಪಿ ಜಿಲ್ಲೆ: ಮತದಾನ ಪ್ರಮಾಣ ಹೆಚ್ಚಳ
Last Updated 13 ಮೇ 2018, 8:38 IST
ಅಕ್ಷರ ಗಾತ್ರ

ಉಡುಪಿ: ಮತದಾನದ ಪ್ರಮಾಣ ಹೆಚ್ಚಿಸಲು ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆ ಸಮಿತಿ (ಸ್ವೀಪ್‌) ಮಾಡಿದ ಕಾರ್ಯಕ್ರಮಗಳು ಫಲ ನೀಡಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ. 2013ರಲ್ಲಿ ಶೇ76.62 ಮತದಾನವಾಗಿತ್ತು, ಈ ಬಾರಿ ಶೇ78.57 ಆಗಿದೆ.

ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಅವರ ಅಧ್ಯಕ್ಷತೆಯ ಸ್ವೀಪ್ ಸಮಿತಿ ಜಿಲ್ಲೆಯಾದ್ಯಂತ ಮತದಾನ ಜಾಗೃತಿಗಾಗಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿತ್ತು.

ಕಾಲೇಜು ವಿದ್ಯಾರ್ಥಿಗಳನ್ನು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಮಾಡಿ ಯುವ ಮತದಾರರಿಗೆ ಮತದಾನದ ಮಹತ್ವದ ಸಂದೇಶ ತಲುಪಿಸಲಾಯಿತು. ಹೊಸ ಮತದಾರರ ಮೇಲೆ ಇದು ತುಂಬಾ ಪ್ರಭಾವ ಬೀರಿತು.

ಸಾಂಪ್ರದಾಯಿಕ ಕಾರ್ಯಕ್ರಮಗಳ ಜೊತೆಗೆ ಕೆಲವು ವಿನೂತನ ಪ್ರಯತ್ನಗಳನ್ನು ಮಾಡಿದ್ದನ್ನು ಸ್ಮರಿಸಬಹುದು. ಪ್ಯಾರಾಗ್ಲೈಡಿಂಗ್ ಮೂಲಕ ಉಡುಪಿ ಹಾಗೂ ಮಣಿಪಾಲ ಭಾಗದ ಜನರನ್ನು ಸೆಳೆಯಲಾಯಿತು. ಆಕಾಶದಲ್ಲಿ ಹಾರಾಡುತ್ತಲೇ ಕರ ಪತ್ರಗಳನ್ನು ತೂರುವ ಮೂಲಕ ಸಂದೇಶ ತಲುಪಿಸಲಾಯಿತು.

ಅಂಗವಿಕಲರನ್ನು ಮತಗಟ್ಟೆಗೆ ಕರೆತರಲು ಯೋಜನೆ ರೂಪಿಸಲಾಯಿತು. ಅಂಗವಿಕಲರು ಹೆಚ್ಚಾಗಿರುವ 58 ಮತಗಟ್ಟೆ
ಗಳನ್ನು ಗುರುತಿಸಿ ಅಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲಾಯಿತು. ಅಲ್ಲದೆ ಮತದಾನದ ಸಂದೇಶ ಎಲ್ಲ ಅಂಗವಿಕಲರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಯಿತು. ಮಲ್ಪೆ ಕಡಲ ಕಿನಾರೆಯಲ್ಲಿಯೂ ಆಕರ್ಷಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ನೂರಾರು ಮಂದಿ ಅದರಲ್ಲಿ ಭಾಗವಹಿಸಿದ್ದರು.

ಅಗತ್ಯಕ್ಕೆ ಅನುಗುಣವಾಗಿ ಮತಗಟ್ಟೆಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಅಲ್ಲದೆ ಗುಡ್ಡಗಾಡು ಪ್ರದೇಶದಲ್ಲಿರುವ ಹಾಗೂ ತುಂಬಾ ದೂರ ನಡೆದುಕೊಂಡೇ ಬರಬೇಕಾದ ಪರಿಸ್ಥಿತಿ ಇದ್ದ ಕೆಲವು ಕಡೆ ವಾಹನ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು. ಎಲ್ಲ ಮತಗಟ್ಟೆಗಳಿಗೆ ಉತ್ತಮ ರೀತಿಯಲ್ಲಿ ಸೌಲಭ್ಯವನ್ನು ಸಹ ಕಲ್ಪಿಸಲಾಗಿತ್ತು.

ಮತದಾರರಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲಾಗಿತ್ತು. ಬಿಸಿಲಿನ ಝಳ ತಪ್ಪಿಸಲು ಕೆಲವೆಡೆ ಶಾಮಿಯಾನ ಹಾಕಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಅಂಗವಿಕಲರಿಗೆ ಕಾಲಿ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು
– ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾಧಿಕಾರಿ

**
ಮತದಾರರಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲಾಗಿತ್ತು. ಬಿಸಿಲಿನ ಝಳ ತಪ್ಪಿಸಲು ಕೆಲವೆಡೆ ಶಾಮಿಯಾನ ಹಾಕಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಅಂಗವಿಕಲರಿಗೆ ಕಾಲಿ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು
– ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT