ಕಲ್ಲು ತೂರಾಟ 5 ಜನರಿಗೆ ಗಾಯ

7

ಕಲ್ಲು ತೂರಾಟ 5 ಜನರಿಗೆ ಗಾಯ

Published:
Updated:
ಕಲ್ಲು ತೂರಾಟ 5 ಜನರಿಗೆ ಗಾಯ

ಕೆಂಭಾವಿ: ಇಲ್ಲಿನ ಸುರಪುರ ಮತಕ್ಷೇತ್ರ ವ್ಯಾಪ್ತಿಯ ಚಿಗರಿಹಾಳ ಗ್ರಾಮದಲ್ಲಿ ಶನಿವಾರ ನಡೆದ ಮತದಾನದ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ನಡುವೆ ಮತದಾನ ವಿಚಾರಕ್ಕೆ ನಡೆದ ಮಾತಿನ ಚಕಮಕಿಯು ವಿಕೋಪಕ್ಕೆ ಹೋಗಿ ಎರಡೂ ಪಕ್ಷದ ಕಾರ್ಯಕರ್ತರ ಮಧ್ಯ ಗಲಾಟೆ ನಡೆದು ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಮತದಾರರನ್ನು ಓಲೈಸಲು ಎರಡೂ ಪಕ್ಷದ ಕಾರ್ಯಕರ್ತರು ಮತದಾನ ಕೇಂದ್ರದಲ್ಲಿ ಜಮಾವಣೆಗೊಂಡಿದ್ದೆ ಈ ಘಟನೆಗೆ ಕಾರಣ ಎನ್ನಲಾಗಿದೆ.

ಗಾಯಗೊಂಡವರನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಮುಂಜಾಗೃತ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry