ಬುಧವಾರ, ಮಾರ್ಚ್ 3, 2021
26 °C

ವಾಲಿಬಾಲ್ ಕೋಚ್ ಮಾದೇಗೌಡ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಲಿಬಾಲ್ ಕೋಚ್ ಮಾದೇಗೌಡ ನಿಧನ

ಮಂಡ್ಯ:  ಅಂತರರಾಷ್ಟ್ರೀಯ ಮಟ್ಟದ ವಾಲಿಬಾಲ್ ಕೋಚ್‌,  ಮಂಡ್ಯದ ಹೊಸಹಳ್ಳಿ ಬಡಾವಣೆ ನಿವಾಸಿ ಎಂ.ಎಸ್‌.ಮಾದೇಗೌಡ (68) ಅವರು ಭಾನುವಾರ ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಗಂಡುಮಕ್ಕಳು ಇದ್ದಾರೆ. ಮೈಷುಗರ್‌ ಸಕ್ಕರೆ ಕಾರ್ಖಾನೆಯಲ್ಲಿ ಕ್ರೀಡಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ರಾಷ್ಟ್ರಮಟ್ಟದ ವಾಲಿಬಾಲ್‌ ಟೂರ್ನಿಗಳಲ್ಲಿ ಆಡಿದ್ದ ಅವರು, ಹಲವು ಬಾರಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ತಂಡಗಳಿಗೆ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದರು.

ರಾಜ್ಯ ವಾಲಿಬಾಲ್‌ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿ, ವ್ಯವಸ್ಥಾಪಕರಾಗಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಪಾಂಡವಪುರ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.  (ಸಂಪರ್ಕ ಮೊಬೈಲ್: 9108162999).

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.