ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9ನೇ ಪರಿಚ್ಛೇದಕ್ಕೆ ಎಸ್‌ಸಿ, ಎಸ್‌ಟಿ ಕಾಯ್ದೆ?

Last Updated 13 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ (ಎಸ್‌ಸಿ, ಎಸ್‌ಟಿ ಕಾಯ್ದೆ) ಅಡಿಯಲ್ಲಿ ದೂರು ದಾಖಲಾದರೆ ಆರೋಪಿಯನ್ನು ತಕ್ಷಣವೇ ಬಂಧಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್‌ ತೀರ್ಪನ್ನು ರದ್ದುಗೊಳಿಸುವುದಕ್ಕಾಗಿ ಸುಗ್ರೀವಾಜ್ಞೆ ತರುವ ಬಗ್ಗೆ ಕೇಂದ್ರ ಸರ್ಕಾರ ಚಿಂತಿಸುತ್ತಿದೆ.

ಅಷ್ಟೇ ಅಲ್ಲದೆ, ಈ ಕಾಯ್ದೆಯನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆಯೂ ಯೋಚಿಸಲಾಗುತ್ತಿದೆ. ಕಾಯ್ದೆಯನ್ನು ಈ ಪರಿಚ್ಛೇದಕ್ಕೆ ಸೇರಿಸಿದರೆ ಅದನ್ನು ಮತ್ತೆ ನ್ಯಾಯಾಲಯದಲ್ಲಿ ಪ್ರಶ್ನಿಸುವುದಕ್ಕೆ ಅವಕಾಶ ಇರುವುದಿಲ್ಲ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಈ ಮಸೂದೆ ಮಂಡನೆ ಆಗುವ ಸಾಧ್ಯತೆ ಇದೆ. ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯ ಎಲ್ಲ ಅವಕಾಶಗಳನ್ನು ಮೂಲರೂಪದಲ್ಲಿ ಇದ್ದ ಹಾಗೆಯೇ ಉಳಿಸಿಕೊಳ್ಳಲಾಗುವುದು.

ಎಸ್‌ಸಿ, ಎಸ್‌ಟಿ ಕಾಯ್ದೆ ಬಗ್ಗೆ ಸುಪ್ರೀಂ ಕೋರ್ಟ್‌ ಮಾರ್ಚ್‌ನಲ್ಲಿ ನೀಡಿದ್ದ ತೀರ್ಪು ಈ ಕಾಯ್ದೆಯನ್ನು ದುರ್ಬಲಗೊಳಿಸಿದೆ ಎಂಬ ಆರೋಪ ಕೇಳಿ ಬಂದಿತ್ತು.

ಬಳಿಕ, ಉತ್ತರ ಭಾರತದಾದ್ಯಂತ ನಡೆದ ಪ್ರತಿಭಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT