ಲೊಟ್ಟೆಗೊಲ್ಲಹಳ್ಳಿ, ಕುಷ್ಠಗಿ ಕ್ಷೇತ್ರದ ಎರಡು ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

ಬೆಂಗಳೂರು, ಕುಷ್ಠಗಿ: ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿ ಮತ್ತು ಕೊಪ್ಪಳ ಜಿಲ್ಲೆ ಕುಷ್ಠಗಿ ಕ್ಷೇತ್ರದ ಎರಡು ಮತಗಟ್ಟೆಗಳಲ್ಲಿ ಸೋಮವಾರ ಮರು ಮತದಾನ ಆರಂಭವಾಗಿದೆ.
ಜನರು ಮತಗಟ್ಟೆಗಳತ್ತ ಹೆಜ್ಜೆ ಹಾಕಿದ್ದು, ಮತ ಚಾಲಯಿಸುತ್ತಿದ್ದಾರೆ. ಮತಗಟ್ಟೆಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
‘ಕುಷ್ಠಗಿ ಕ್ಷೇತ್ರದಲ್ಲಿ ಸುಮಾರು 250 ಮತದಾರರು 21ರ ಬದಲಾಗಿ 20ನೇ ಸಂಖ್ಯೆಯ ಮತಗಟ್ಟೆಯಲ್ಲಿ ಮತ ಹಾಕಿದ್ದಾರೆ. ಇದು ಕಾನೂನಿನ ಪ್ರಕಾರ ಲೋಪವಾಗುತ್ತದೆ. ಹೀಗಾಗಿ, ಮರು ಮತದಾನ ನಡೆಸಲು ತೀರ್ಮಾನಿಸಿದ್ದೇವೆ’ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.
‘ಇಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಈ ತಪ್ಪು ಮಾಡಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು’ ಎಂದೂ ಅವರು ಹೇಳಿದ್ದರು.
‘ವಿದ್ಯುನ್ಮಾನ ಮತ ಯಂತ್ರದಲ್ಲಿ ದೋಷ ಕಂಡುಬಂದ ಕಾರಣ ಲೊಟ್ಟೆಗೊಲ್ಲಹಳ್ಳಿ ಮತಗಟ್ಟೆಯಲ್ಲಿ ಮತದಾನ ಮುಂದೂಡಲಾಗಿತ್ತು. ಇಲ್ಲಿ 1,444 ಹಾಗೂ ಕುಷ್ಠಗಿಯ ಎರಡು ಮತಗಟ್ಟೆಗಳಲ್ಲಿ ಒಟ್ಟು 1,683 ಮಂದಿ ಮತ ಚಲಾಯಿಸಬೇಕಿದೆ. ಮರುಮತದಾನದ ಬಗ್ಗೆ ಅವರಿಗೆ ಅರಿವು ಮೂಡಿಸಲಾಗಿದೆ’ ಎಂದು ಅವರು ತಿಳಿಸಿದ್ದರು.
Re-polling underway at booth numbers 20 and 21 in Koppal district's Kushtagi constituency. #KarnatakaElections2018 pic.twitter.com/35rbRXCxX3
— ANI (@ANI) May 14, 2018
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.