ವಿಶ್ರಾಂತಿ, ಮತದಾನದ ಚರ್ಚೆ

7

ವಿಶ್ರಾಂತಿ, ಮತದಾನದ ಚರ್ಚೆ

Published:
Updated:

ಮಾಲೂರು: ಚುನಾವಣೆ ಮುಗಿದ ಮಾರನೆ ದಿನವಾದ ಭಾನುವಾರ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ತಮ್ಮ ನಿವಾಸಗಳಲ್ಲಿ ವಿಶ್ರಾಂತಿ ಪಡೆಯುವ ಮೂಲಕ ಕಾರ್ಯಕರ್ತರೊಂದಿಗೆ ಮತಗಟ್ಟೆಗಳ ಬಗ್ಗೆ ಚರ್ಚೆ ನಡೆಸಿದರು.

ಜೆಡಿಎಸ್ ಅಭ್ಯರ್ಥಿ ಶಾಸಕ ಕೆ.ಎಸ್.ಮಂಜುನಾಥ್‌ಗೌಡ ಕೋಡಿಹಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಬೆಳಿಗ್ಗಿನಿಂದಲೇ ಕಾರ್ಯಕರ್ತರೊಂದಿಗೆ ಚರ್ಚೆಯಲ್ಲಿ ತೊಡಗಿದ್ದರು. ತಾಲ್ಲೂಕಿನ ವಿವಿಧ ಹೋಬಳಿಗಳ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಆಯಾ ಮತಗಟ್ಟೆಗಳ ಬಗ್ಗೆ ಚರ್ಚೆ ನಡೆಸಿದರು.

ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಕೆ.ವೈ.ನಂಜೇಗೌಡ ಸ್ವಗ್ರಾಮ ಕೊಮ್ಮನ ಹಳ್ಳಿಯಲ್ಲಿ ಮತದಾನದ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಿದರು.

ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯಶೆಟ್ಟಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಭಾನುವಾರ ಪೂರ್ತಿ ವಿಶ್ರಾಂತಿಯಲ್ಲಿ ತೊಡಗಿದ್ದರು.

20 ದಿನಗಳಿಂದ ನಿದ್ದೆಗೆಟ್ಟು ಕ್ಷೇತ್ರದಲ್ಲಿ ಕೆಲಸ ಮಾಡಿದ್ದು ತುಂಬಾ ಆಯಾಸವಾಗಿದೆ. ಅದಕ್ಕಾಗಿ ವಿಶ್ರಾಂತಿ ಪಡೆಯುತ್ತಿರುವುದಾಗಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry