ಶುಕ್ರವಾರ, ಮಾರ್ಚ್ 5, 2021
18 °C

ಜೇಟ್ಲಿಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ

ಪಿಟಿಐ Updated:

ಅಕ್ಷರ ಗಾತ್ರ : | |

ಜೇಟ್ಲಿಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಲ್ಲಿನ ಏಮ್ಸ್‌ನಲ್ಲಿ ಸೋಮವಾರ ಕಿಡ್ನಿ (ಮೂತ್ರ ಪಿಂಡ) ಕಸಿ ಶಸ್ತ್ರಚಿಕಿತ್ಸೆಗೆ ಒಳಗಾದರು.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಜೇಟ್ಲಿ ಮತ್ತು ಕಿಡ್ನಿ ದಾನ ಮಾಡಿದವರ ಆರೋಗ್ಯ ಸ್ಥಿರವಾಗಿದೆ.

ಜೇಟ್ಲಿ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ತಿಂಗಳಿನಿಂದ ಅವರಿಗೆ ಡಯಾಲಿಸಿಸ್‌ ಮಾಡಲಾಗುತ್ತಿತ್ತು. ಮೂತ್ರಪಿಂಡ ತಜ್ಞ ಅಪೋಲೊ ಆಸ್ಪತ್ರೆಯ ಡಾ. ಸಂದೀಪ್ ಗುಲೇರಿಯಾ ಹಾಗೂ ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಶಸ್ತ್ರಚಿಕಿತ್ಸೆ ನಡೆಸಿ ದರು. ಮುಂದಿನ ವಾರ ಲಂಡನ್‌ನಲ್ಲಿ ನಿಗದಿಯಾಗಿದ್ದ 10ನೇ ಭಾರತ

ಇಂಗ್ಲೆಂಡ್ ಆರ್ಥಿಕ ಶೃಂಗಸಭೆಯಲ್ಲಿ ಭಾಗಿಯಾಗಬೇಕಿದ್ದ ಅವರು ಅನಾರೋಗ್ಯದ ಕಾರಣ ಪ್ರವಾಸ ರದ್ದುಗೊಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.