ಸೋಮವಾರ, ಮಾರ್ಚ್ 1, 2021
24 °C

ಔರಂಗಾಬಾದ್‌ ಗಲಭೆಕೋರರ ಜತೆ ಪೊಲೀಸರು: ತನಿಖೆಗೆ ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

ಔರಂಗಾಬಾದ್‌ ಗಲಭೆಕೋರರ ಜತೆ ಪೊಲೀಸರು: ತನಿಖೆಗೆ ಆದೇಶ

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ಹಿಂಸಾಚಾರದ ವೇಳೆ ಗಲಭೆಕೋರರ ಜೊತೆ ಪೊಲೀಸರು ನಡೆದುಕೊಂಡು ಹೋಗುತ್ತಿರುವ ವಿಡಿಯೊ ಬಹಿರಂಗವಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

ಶುಕ್ರವಾರ ರಾತ್ರಿ ಔರಂಗಾಬಾದ್ ನಗರದಲ್ಲಿ ವಾಹನಕ್ಕೆ ಬೆಂಕಿ ಹಚ್ಚಿ, ಆಸ್ತಿಪಾಸ್ತಿಗೆ ಹಾನಿ ಮಾಡಿದ ಗುಂಪಿನ ಜೊತೆ ಪೊಲೀಸರು ಕಾಣಿಸಿಕೊಂಡಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನೆಯನ್ನು ಚಿತ್ರೀಕರಿಸಿದವರು ತಮ್ಮಲ್ಲಿರುವ ವಿಡಿಯೊವನ್ನು ಪೊಲೀಸರಿಗೆ ಹಸ್ತಾಂತರಿಸಿದಲ್ಲಿ ಅದರ ನೈಜತೆ ಪರಿಶೀಲಿಸಲಾಗುವುದು. ಪೊಲೀಸರು ಭಾಗಿಯಾಗಿರುವುದು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೆಚ್ಚುವರಿ ಡಿಜಿ ಬಿಪಿನ್ ಬಿಹಾರಿ ತಿಳಿಸಿದ್ದಾರೆ.

ನಗರದಲ್ಲಿ ಶಾಂತಿ ನೆಲೆಸಿದ್ದು, ತನಿಖೆ ನಡೆಸಲಾಗುತ್ತಿದೆ. ವಿಡಿಯೊ ಬಗ್ಗೆ ಈಗಲೇ ಪ್ರತಿಕ್ರಿಯಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಹಿಂಸಾಚಾರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದು ಅವರನ್ನು ಏರ್ ಆಂಬುಲೆನ್ಸ್ ಮೂಲಕ ಮುಂಬೈಗೆ ಕಳುಹಿಸಲಾಗಿದೆ ಎಂದಿದ್ದಾರೆ. ಅಕ್ರಮ ನೀರಿನ ಸಂಪರ್ಕ ಸಂಬಂಧವಾಗಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಮೃತಪಟ್ಟಿದ್ದರು. ಪೊಲೀಸರು ಸೇರಿ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.