ಎರಡು ದಿನ ಮಳೆ ಸಂಭವ

7

ಎರಡು ದಿನ ಮಳೆ ಸಂಭವ

Published:
Updated:
ಎರಡು ದಿನ ಮಳೆ ಸಂಭವ

ಚೆನ್ನೈ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ ಎರಡು ದಿನಗಳಲ್ಲಿ ಕರ್ನಾಟಕ, ಕೇರಳದ ಕೆಲ ಪ್ರದೇಶಗಳು ಹಾಗೂ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24ರಿಂದ 48 ಗಂಟೆ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ ನಿರ್ದೇಶಕ  ಬಾಲಚಂದ್ರನ್ ತಿಳಿಸಿದ್ದಾರೆ.

ಮೂರೂ ರಾಜ್ಯಗಳ ಕೆಲ ಭಾಗಗಳಲ್ಲಿ ಚಂಡಮಾರುತ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಜೂನ್ 1ರಂದು ನೈರುತ್ಯ ಮುಂಗಾರು ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಕೆಲವು ದಿನಗಳಿಂದ ಕೇರಳ, ತಮಿಳುನಾಡಿನಲ್ಲಿ ಸಾಕಷ್ಟು ಮಳೆಯಾಗಿದೆ. ಕೇರಳದ ತಿರುವನಂತಪುರ ನಗರದಲ್ಲಿ 10 ಸೆಂ. ಮೀ. ಮತ್ತು ಪಾಲಕ್ಕಾಡ್ ಜಿಲ್ಲೆಯ ತ್ರಿತ್ತಾಲ ಗ್ರಾಮದಲ್ಲಿ 7 ಸೆಂ. ಮೀ. ಮಳೆಯಾಗಿದೆ. ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಾಲ್ಕು ಸೆಂ.ಮೀ. ಮಳೆ ಸುರಿದಿದೆ. ಕೇರಳದಲ್ಲಿ ಈಗಾಗಲೇ ಮುಂಗಾರುಪೂರ್ವ ಮಳೆ ಸುರಿಯಲು ಆರಂಭಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry