ಜೆಡಿಎಸ್‌ನೊಂದಿಗೆ ಮೈತ್ರಿ ವಿಚಾರ; ನಾಯಕರೊಂದಿಗೆ ಚರ್ಚೆ: ಮಲ್ಲಿಕಾರ್ಜುನ ಖರ್ಗೆ

7
ಮೈತ್ರಿ ಪ್ರಶ್ನೆಯೇ ಇಲ್ಲ: ಸದಾನಂದಗೌಡ

ಜೆಡಿಎಸ್‌ನೊಂದಿಗೆ ಮೈತ್ರಿ ವಿಚಾರ; ನಾಯಕರೊಂದಿಗೆ ಚರ್ಚೆ: ಮಲ್ಲಿಕಾರ್ಜುನ ಖರ್ಗೆ

Published:
Updated:
ಜೆಡಿಎಸ್‌ನೊಂದಿಗೆ ಮೈತ್ರಿ ವಿಚಾರ; ನಾಯಕರೊಂದಿಗೆ ಚರ್ಚೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಸರ್ಕಾರ ರಚಿಸಲು ಜೆಡಿಎಸ್‌ನೊಂದಿಗೆ ಮೈತ್ರಿ ಮಾತುಕತೆ ನಡೆಸುವ ಸಂಬಂಧ ಚರ್ಚಿಸುವುದಾಗಿ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಜ್ಯದ 222 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಬಿರುಸಿನಿಂದ ನಡೆಯುತ್ತಿದ್ದು,107 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ 66 ಹಾಗೂ ಜೆಡಿಎಸ್‌ 47 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ.

‘11–11:30ಕ್ಕೆ ಸ್ಥಾನಗಳ ಮಾಹಿತಿ ಸ್ಪಷ್ಟತೆ ಸಿಗಲಿದ್ದು, ಜೆಡಿಎಸ್‌ನೊಂದಿಗೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಅಶೋಕ್‌ ಗೆಹ್ಲೊಟ್‌ ಹಾಗೂ ಗುಲಾಮ್‌ ನಬಿ ಆಜಾದ್‌ ಅವರೊಂದಿಗೆ ಚರ್ಚಿಸಲಾಗುತ್ತದೆ’ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿರುವುದಾಗಿ ಎಎನ್‌ಐ ಟ್ವೀಟ್‌ ಮಾಡಿದೆ.

‘ನಾವು ಆಗಲೇ ಬಹುಮತ ಸಂಖ್ಯೆಯನ್ನು ದಾಟುತ್ತಿರುವುದರಿಂದ ಜೆಡಿಎಸ್‌ನೊಂದಿಗೆ ಮೈತ್ರಿ ಪ್ರಶ್ನೆಯೇ ಇಲ್ಲ’ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry