ಗುರುವಾರ , ಫೆಬ್ರವರಿ 25, 2021
31 °C

ನಮ್ಮ ರೆಸಾರ್ಟ್‍ಗೆ ಬನ್ನಿ ;ಕೇರಳ ಪ್ರವಾಸೋದ್ಯಮ ಇಲಾಖೆಯ ಟ್ವೀಟ್ ವೈರಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಮ್ಮ ರೆಸಾರ್ಟ್‍ಗೆ ಬನ್ನಿ ;ಕೇರಳ ಪ್ರವಾಸೋದ್ಯಮ ಇಲಾಖೆಯ ಟ್ವೀಟ್ ವೈರಲ್

ಬೆಂಗಳೂರು: ಕರ್ನಾಟಕದಲ್ಲಿ ಗದ್ದುಗೆಯೇರಲು ‘ಮೈತ್ರಿ’ ಕಸರತ್ತು ನಡೆಯುತ್ತಿರುವ ಹೊತ್ತಲ್ಲಿ ಕೇರಳ ಪ್ರವಾಸೋದ್ಯಮ ಇಲಾಖೆ ಟ್ವೀಟ್ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಕರ್ನಾಟಕದಲ್ಲಿ ಬಿಜೆಪಿ ಬಹುತೇಕ ಸೀಟುಗಳನ್ನು ಗೆದ್ದುಕೊಂಡಿದ್ದರೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಇತ್ತ ಕಾಂಗ್ರೆಸ್ ಸರ್ಕಾರ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೇರುವ ಸಿದ್ಧತೆ ನಡೆಸಿದೆ.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧಿಕಾರಕ್ಕೇರುವ ಹಪಾಹಪಿಯಲ್ಲಿರುವಾಗ ಜೆಡಿಎಸ್ ಇಲ್ಲಿ ಕಿಂಗ್ ಮೇಕರ್ ಆಗಿ ನಿಂತಿದೆ. ಈ ನಡುವೆ ರೆಸಾರ್ಟ್ ರಾಜಕಾರಣ ಸಾಧ್ಯತೆಗಳ ಬಗ್ಗೆಯೂ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಹೀಗಿರುವಾಗ ಕೇರಳ ಪ್ರವಾಸೋದ್ಯಮ ಇಲಾಖೆ  ದೇವರ ಸ್ವಂತ ನಾಡು ಕೇರಳದ ಸುರಕ್ಷಿತ ಮತ್ತು ಸುಂದರ ರೆಸಾರ್ಟ್‍ಗಳಿಗೆ ಕರ್ನಾಟಕದ ಎಲ್ಲ ಶಾಸಕರನ್ನು ಸ್ವಾಗತಿಸುತ್ತೇವೆ ಎಂದು ಟ್ವೀಟ್ ಮಾಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.