ಸೋಮವಾರ, ಮಾರ್ಚ್ 8, 2021
24 °C

ಐಸಿಸಿ ಮುಖ್ಯಸ್ಥರಾಗಿ ಶಶಾಂಕ್‌ ಮರು ಆಯ್ಕೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಐಸಿಸಿ ಮುಖ್ಯಸ್ಥರಾಗಿ ಶಶಾಂಕ್‌ ಮರು ಆಯ್ಕೆ

ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಮುಖ್ಯಸ್ಥರಾಗಿ ಭಾರತದ ಶಶಾಂಕ್‌ ಮನೋಹರ್‌ ಅವಿರೋಧವಾಗಿ ಮರು ಆಯ್ಕೆ ಆಗಿದ್ದಾರೆ. ಈ ವಿಷಯವನ್ನು ಐಸಿಸಿ ಮಂಗಳವಾರ ‍ಪ್ರಕಟಿಸಿದ್ದು ಅವರ ಅಧಿಕಾರದ ಅವಧಿಯು ಎರಡು ವರ್ಷದ್ದಾಗಿರುತ್ತದೆ.

2016ರಲ್ಲಿ ಐಸಿಸಿಯ ಮೊದಲ ಸ್ವತಂತ್ರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಶಶಾಂಕ್‌ ಈ ಬಾರಿ ಮರು ಆಯ್ಕೆ ಬಯಸಿದ್ದ ಏಕೈಕ ಅಭ್ಯರ್ಥಿಯಾಗಿದ್ದರು.

‘ಮುಂದಿನ ಎರಡು ವರ್ಷಗಳಲ್ಲಿ ಕ್ರಿಕೆಟ್‌ಗೆ ಸಂಬಂಧಿಸಿ ಜಾಗತಿಕ ನೀತಿ ಯೊಂದನ್ನು ಸಿದ್ಧಪಡಿಸುವ ಕಾರ್ಯ ನಡೆಯಲಿದೆ. ಕ್ರಿಕೆಟ್‌ ಕ್ರೀಡೆಯನ್ನು ಇನ್ನಷ್ಟು ಜನಪ್ರಿಯಗೊಳಿಸುವುದು ನಮ್ಮ ಉದ್ದೇಶ’ ಎಂದು ಶಶಾಂಕ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ ಭೇಟಿ: ಟೆಸ್ಟ್ ಕ್ರಿಕೆಟ್‌ನ ಭವಿಷ್ಯ ಸೇರಿದಂತೆ ವಿಶ್ವ ಕ್ರಿಕೆಟ್‌ಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಐಸಿಸಿಯ ಹಿರಿಯ ಅಧಿಕಾರಿಗಳು ಗುರುವಾರ ಬಿಸಿಸಿಐ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ, ಹಂಗಾಮಿ ಕಾರ್ಯದರ್ಶಿ ಅಮಿತಾಬ್‌ ಚೌಧರಿ, ಖಜಾಂಚಿ ಅನಿರುದ್ಧ ಚೌಧರಿ ಮತ್ತು ಸಿಇಒ ರಾಹುಲ್ ಜೊಹ್ರಿ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.