ಶುಕ್ರವಾರ, ಫೆಬ್ರವರಿ 26, 2021
27 °C

ಕ್ಲಬ್‌ ಕ್ರಿಕೆಟ್‌: ಬ್ಯಾಂಕ್ರಾಫ್ಟ್‌ಗೆ ಅವಕಾಶ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಕ್ಲಬ್‌ ಕ್ರಿಕೆಟ್‌: ಬ್ಯಾಂಕ್ರಾಫ್ಟ್‌ಗೆ ಅವಕಾಶ

ಪರ್ತ್‌: ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧ ಶಿಕ್ಷೆಗೊಳಗಾಗಿದ್ದ ಆಸ್ಟ್ರೇಲಿಯಾದ ಕ್ರಿಕೆಟಿಗ ಕ್ಯಾಮರಾನ್‌ ಬ್ಯಾಂಕ್ರಾಫ್ಟ್‌ಗೆ ವೆಸ್ಟರ್ನ್‌ ಆಸ್ಟ್ರೇಲಿಯಾದ ವಿಲ್ಲೆಟನ್‌ ಕ್ರಿಕೆಟ್‌ ಕ್ಲಬ್‌ ಆಡಲು ಅವಕಾಶ ನೀಡಲಾಗಿದೆ.

ಸೋಮವಾರ ಸಂಜೆ ಸಭೆ ಸೇರಿದ್ದ ವೆಸ್ಟರ್ನ್‌ ಆಸ್ಟ್ರೇಲಿಯಾದ 16 ಪ್ರಿಮೀಯರ್‌ ಕ್ರಿಕೆಟ್‌ ಕ್ಲಬ್‌ಗಳ ಪದಾಧಿಕಾರಿಗಳು ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

‘ಬ್ಯಾಂಕ್ರಾಫ್ಟ್‌ಗೆ ಆಡಲು ಅವಕಾಶ ನೀಡುವ ಸಂಬಂಧ ಎಲ್ಲ ಪದಾಧಿಕಾರಿಗಳು ಸಮ್ಮತಿ ಸೂಚಿಸಿದ್ದಾರೆ. ಕ್ಯಾಮರಾನ್‌ ಅವರಿಗೆ ಇದೊಂದು ಸಂತಸದ ಸುದ್ದಿ’ ಎಂದು ವೆಸ್ಟರ್ನ್‌ ಆಸ್ಟ್ರೇಲಿಯಾ ಕ್ರಿಕೆಟ್‌ ಸಂಸ್ಥೆಯ ಮುಖ್ಯಸ್ಥ ಕ್ರಿಸ್ಟಿನಾ ಮ್ಯಾಥ್ಯೂಸ್‌ ಹೇಳಿದ್ದಾರೆ.

ಮಾರ್ಚ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ್ದಕ್ಕಾಗಿ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್‌ ಸ್ಮಿತ್‌, ಉಪನಾಯಕ ಡೇವಿಡ್‌ ವಾರ್ನರ್‌ ಅವರಿಗೆ ಒಂದು ವರ್ಷ ಹಾಗೂ ಕ್ಯಾಮರಾನ್‌ ಬ್ಯಾಂಕ್ರಾಫ್ಟ್‌ಗೆ ಒಂಬತ್ತು ತಿಂಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿಷೇಧ ಹೇರಲಾಗಿತ್ತು.

ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿದ ಈ ಶಿಕ್ಷೆಯು ವೆಸ್ಟರ್ನ್‌ ಪ್ರಿಮೀಯರ್‌ ಕ್ರಿಕೆಟ್‌ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಅದರ ವ್ಯಾಪ್ತಿಯಲ್ಲಿ ಬರುವ ಕ್ಲಬ್‌ಗಳಿಗೂ ಅನ್ವಯವಾಗುತ್ತದೆ. ಆದರೆ, ನ್ಯೂ ಸೌಥ್‌ ವೇಲ್ಸ್‌ನ ಕ್ಲಬ್‌ಗಳಿಗೆ ಇದು ಅನ್ವಯಿಸುವುದಿಲ್ಲ. ಹಾಗಾಗಿ, ನ್ಯೂ ಸೌಥ್‌ ವೇಲ್ಸ್‌ನ ವ್ಯಾಪ್ತಿಯಲ್ಲಿ ಬರುವ ಕ್ಲಬ್‌ಗಳಲ್ಲಿ ಸ್ಟೀವ್‌ ಸ್ಮಿತ್‌ ಹಾಗೂ ಡೇವಿಡ್‌ ವಾರ್ನರ್‌ ಅವರು ಆಡಲು ಅವಕಾಶವಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.