ಸೋಮವಾರ, ಮಾರ್ಚ್ 1, 2021
24 °C
ಕನಕಪುರ ಕ್ಷೇತ್ರದಲ್ಲಿ ದಾಖಲೆಯ ಅಂತರದ ಜಯ

7 ನೇ ಬಾರಿ ಗೆದ್ದ ಡಿ.ಕೆ.ಶಿವಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

7 ನೇ ಬಾರಿ ಗೆದ್ದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಶಿವಕುಮಾರ್‌ ಪುನರಾಯ್ಕೆ ಆಗಿದ್ದಾರೆ. ಆದರೆ ಹಿಂದೆಂದಿಗಿಂತ ಹೆಚ್ಚು ಮತಗಳ ಅಂತರದಲ್ಲಿ ಜಯ ಗಳಿಸಿರುವುದು ಅವರ ಹಿರಿಮೆ.

ಈ ಬಾರಿಯ ಚುನಾವಣೆಯಲ್ಲಿ ಶಿವಕುಮಾರ್ ಬರೋಬ್ಬರಿ 79,909 ಮತಗಳ ಅಂತರದಿಂದ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಹೆಚ್ಚು ಪೈಪೋಟಿಯೇ ಇಲ್ಲದಂತೆ ಅನಾಯಾಸವಾಗಿ ಗೆದ್ದು ಬಂದಿದ್ದಾರೆ. ಇದು ಕ್ಷೇತ್ರದಲ್ಲಿ ಅವರು ಹೊಂದಿರುವ ಹಿಡಿತವನ್ನು ವಿವರಿಸಿ ಹೇಳುವಂತಿದೆ.

ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕಲು ಜೆಡಿಎಸ್ ಹಾಗೂ ಬಿಜೆಪಿ ಮೀನಮೇಷ ಎಣಿಸಿದ್ದು ಅವರ ಗೆಲುವಿನ ಅಂತರ ಹೆಚ್ಚಳಕ್ಕೆ ಕಾರಣವಾಗಿದೆ. ನಾಮಪತ್ರ ಸಲ್ಲಿಕೆಯ ಕಡೆಯ ದಿನಗಳಲ್ಲಿ ಜೆಡಿಎಸ್ ನಾರಾಯಣ ಗೌಡರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿತು. ಬಿಜೆಪಿ ನಂದಿನಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿತು. ಆದರೆ ಈ ಎರಡೂ ಪಕ್ಷಗಳ ಅಭ್ಯರ್ಥಿಗಳ ಪರ ಹೆಚ್ಚು ಪ್ರಚಾರ ನಡೆಯಲಿಲ್ಲ. ಹಲವು ಕೊರತೆಗಳ ನಡುವೆಯೂ ನಾರಾಯಣ ಗೌಡರು ಗಣನೀಯ ಸಂಖ್ಯೆಯಲ್ಲಿ ಮತ ಗಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.