ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡ ಎಚ್.ಡಿ.ಕೆ ದಂಪತಿ

7

ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡ ಎಚ್.ಡಿ.ಕೆ ದಂಪತಿ

Published:
Updated:
ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡ ಎಚ್.ಡಿ.ಕೆ ದಂಪತಿ

ನಾಗಮಂಗಲ: ಎಲ್ಲರೂ ವಿಧಾನಸಭಾ ಚುನಾವಣೆಯ ಫಲಿತಾಂಶದತ್ತ ದೃಷ್ಟಿ ನೆಟ್ಟಿದ್ದರೆ, ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಕಾಲಭೈರವೇಶ್ವರ ದೇವರಿಗೆ ಅಮಾವಾಸ್ಯೆ ಪೂಜೆ ಸಲ್ಲಿಸುವುದರಲ್ಲಿ ನಿರತರಾಗಿದ್ದರು.

ಗೋ ಪೂಜೆಯಲ್ಲೂ ಪಾಲ್ಗೊಂಡ ಅವರು ದೇವಸ್ಥಾನದ ಮುಂಭಾಗದಲ್ಲಿರುವ ಯಾಗ ಮಂಟಪದಲ್ಲಿ ಏರ್ಪಾಡು ಮಾಡಿದ್ದ ಹೋಮದಲ್ಲಿ ಪತ್ನಿ ಅನಿತಾ ಜತೆ ಪಾಲ್ಗೊಂಡರು. ನಂತರ ಆದಿಚುಂಚನಗಿರಿಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಜೆಡಿಎಸ್ ಅಭ್ಯರ್ಥಿ ಸುರೇಶ್ ಗೌಡ ಈ ಸಂದರ್ಭದಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry