ಬಿಜೆಪಿ ವಿಜಯೋತ್ಸವ, ಸಂಭ್ರಮ

7
ಜಿಲ್ಲೆಯಾದ್ಯಂತ ಮೆರವಣಿಗೆ, ಸಿಹಿ ಹಂಚಿ ಸಂತಸ

ಬಿಜೆಪಿ ವಿಜಯೋತ್ಸವ, ಸಂಭ್ರಮ

Published:
Updated:
ಬಿಜೆಪಿ ವಿಜಯೋತ್ಸವ, ಸಂಭ್ರಮ

ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಜಯಗಳಿಸಿದ ಹಿನ್ನೆಲೆಯಲ್ಲಿ ವಿಟ್ಲದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ವಿಟ್ಲದ ಅನಂತಾಡಿ, ಮಂಗಳಪದವು, ಕೇಪು, ಅಳಿಕೆ, ಚಂದಳಿಕೆ ಮೊದಲಾದ ಕಡೆಗಳಿಂದ ಆಗಮಿಸಿದ ನೂರಾರು ಕಾರ್ಯಕರ್ತರು ವಿಟ್ಲದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಜಗನ್ನಾಥ ಸಾಲಿಯಾನ್, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಕಾರ್ಯದರ್ಶಿ ಉದಯ ಆಲಂಗಾರು, ಶಕ್ತಿ ಕೇಂದ್ರ ಅಧ್ಯಕ್ಷ ರಾಮದಾಸ ಶೆಣೈ, ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry