ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ಕೊಟ್ಟರೆ ಪ್ರತಿಭಟನೆ ಮಾಡಬೇಕಾಗುತ್ತದೆ: ಸಿದ್ದರಾಮಯ್ಯ

ಬೆಂಗಳೂರು: ಬೆಳಿಗ್ಗೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ಅಂತಿಮವಾಗಿಲ್ಲ. ಸಂಜೆ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಆಗ ಆಯ್ಕೆಯನ್ನು ಕೈ ನಾಯಕರು ಅಂತಿಮಗೊಳಿಸಲಿದ್ದಾರೆ. ಸಭೆ ಬಳಿಕ ಸಿದ್ದರಾಮಯ್ಯ ಶಾಂಗ್ರೀಲಾ ಹೋಟೆಲ್‌ಗೆ ತೆರಳಿದರು.
ಈ ವೇಳೆ ಮಾತನಾಡಿದ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ರಚನೆಗೆ ಸಂಖ್ಯಾ ಬಲವಿದೆ. ಈ ಆಧಾರದ ಮೇಲೆ ರಾಜ್ಯಪಾಲರು ಅವಕಾಶ ಕೊಡಬೇಕು. ಒಂದು ವೇಳೆ ಬಿಜೆಪಿಗೆ ಅವಕಾಶ ಕೊಟ್ಟರೆ ಸಂವಿಧಾನ ವಿರೋಧಿಯಾಗುತ್ತೆ ಎಂದರು.
ಬಿಜೆಪಿಗೆ ಅವಕಾಶ ಕೊಟ್ಟರೆ ಇದರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತೆ. ಸಂವಿಧಾನ ನಿಯಮಾವಳಿಯಂತೆ ನಡೆದುಕೊಳ್ಳಬೇಕು. ಸಂವಿಧಾನ ಬಾಹಿರವಾಗಿ ನಡೆದುಕೊಂಡರೆ ರಾಜ್ಯಪಾಲರ ಹುದ್ದೆಗೆ ಗೌರವ ಇರಲ್ಲ. ಬಿಜೆಪಿ ಕುದರೆ ವ್ಯಾಪರಕ್ಕೆ ಮುಂದಾಗಿದೆ. ಅದ್ರೆ ನಮ್ಮ ಶಾಸಕರು ಒಂದಾಗಿದ್ದೇವೆ ಎಂದರು.
* ಇವನ್ನೂ ಓದಿ...
* ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ನಾಳೆ?
* ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಕಣ್ಣೀರು ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ
* ‘ಕೈ’-‘ದಳ’ ದೋಸ್ತಿ ಆದ್ರೆ ಹಾಸನ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಕಗ್ಗೊಲೆಯಾಗಲಿದೆ: ಮಂಜೇಗೌಡ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.