ಬಿ.ಎಸ್‌.ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಸಭೆ

7
ಗುರುವಾರ ಪ್ರಮಾಣ ವಚನ?

ಬಿ.ಎಸ್‌.ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಸಭೆ

Published:
Updated:
ಬಿ.ಎಸ್‌.ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಸಭೆ

ಬೆಂಗಳೂರು: ಕೇಂದ್ರ ಸಚಿವರು ಸೇರಿ ಬಿಜೆಪಿ ಮುಖಂಡರು ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸದಲ್ಲಿ ಸಭೆ ನಡೆಯುತ್ತಿದೆ.

ಕೆಪಿಜೆಪಿಯ ಆರ್‌.ಶಂಕರ್‌ ಬಿಜೆಪಿಗೆ ಬೆಂಬಲ ಸೂಚಿಸಿರುವುದರಿಂದ ಬಿಜೆಪಿ ಬಲ 105ಕ್ಕೆ ಏರಿಕೆಯಾಗಿದೆ. ಸರ್ಕಾರ ರಚಿಸಲು ಅವಕಾಶ ಕೋರಿ ಈಗಾಗಲೇ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿದೆ. ಈ ನಡುವೆ  ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ ನಡೆಸಿರುವುದಾಗಿಯೂ ಮೂಲಗಳಿಂದ ತಿಳಿದು ಬಂದಿದೆ.

ನಗರದ ಡಾಲರ್ಸ್‌ ಕಾಲೊನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸದಲ್ಲಿ ಪಕ್ಷದ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಭೆ ಸೇರಿದ್ದಾರೆ. ಕೇಂದ್ರ ಸಚಿವರಾದ ಪ್ರಕಾಶ್‌ ಜಾವಡೇಕರ್‌, ಅನಂತಕುಮಾರ್‌ ಹಾಗೂ ಮುರಳೀಧರ್‌ ರಾವ್‌ ಸೇರಿ ಅನೇಕ ಮುಖಂಡರು ಚರ್ಚೆಯಲ್ಲಿ ಭಾಗಿಯಾಗಿದ್ದಾರೆ.

ಬುಧವಾರ ಬೆಳಿಗ್ಗೆ ನಡೆದ ಸಭೆಯಲ್ಲಿ ಯಡಿಯೂರಪ್ಪ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು. 

ಇನ್ನಷ್ಟು: ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ನಾಳೆ?

ರಾಜ್ಯಪಾಲರಿಗೆ ನಾಯಕನ ಆಯ್ಕೆ ಪ್ರತಿ ಸಲ್ಲಿಸಿ, ಸರ್ಕಾರ ರಚನೆಗೆ ಅವಕಾಶ ಕೋರಿದ್ದೇವೆ: ಯಡಿಯೂರಪ್ಪ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry