ರಾಜಭವನದ ಮುಂದೆ ಬಿಜೆಪಿ ವಿರುದ್ಧ ಜೆಡಿಎಸ್‌ ಕಾರ್ಯರ್ತರ ಪ್ರತಿಭಟನೆ

7

ರಾಜಭವನದ ಮುಂದೆ ಬಿಜೆಪಿ ವಿರುದ್ಧ ಜೆಡಿಎಸ್‌ ಕಾರ್ಯರ್ತರ ಪ್ರತಿಭಟನೆ

Published:
Updated:
ರಾಜಭವನದ ಮುಂದೆ ಬಿಜೆಪಿ ವಿರುದ್ಧ ಜೆಡಿಎಸ್‌ ಕಾರ್ಯರ್ತರ ಪ್ರತಿಭಟನೆ

ಬೆಂಗಳೂರು: ಸರ್ಕಾರ ರಚನೆಗೆ ಅವಕಾಶ ಕೋರಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಸಂಜೆ ರಾಜಭವನಕ್ಕೆ ತೆರಳಿದ್ದು, ಈ ವೇಳೆ ಜೆಡಿಎಸ್‌ ಕಾರ್ಯಕರ್ತರು ರಾಜಭವನದ ಹೊರಗೆ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಶಾಸಕರು, ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ಶಾಸಕರು ರಾಜಭನಕ್ಕೆ ತೆರಳಿದ್ದಾರೆ.

ರಾಜ್ಯಪಾಲ ವಜುಬಾಯಿ ವಾಲಾ ಅವರು ಶಾಸಕರ ಭೇಟಿಗೆ 5ಕ್ಕೆ ಸಮಯ ನೀಡಿದ್ದರು. ಸಮಯಕ್ಕೂ ಮುನ್ನವೇ ರಾಜಭವನ ಬಳಿ ತಲುಪಿದ ಎಚ್‌.ಡಿ.ಕುಮಾರಸ್ವಾಮಿ ಅವರ ಪ್ರವೇಶಕ್ಕೆ ಪೊಲೀಸರು ಅವಕಾಶ ನೀಡದೆ, ಪ್ರವೇಶ ದ್ವಾರದಲ್ಲಿಯೇ ತಡೆದರು.

ಈ ವೇಳೆ ಸ್ಥಳದಲ್ಲಿ ಸೇರಿದ್ದ ಜೆಡಿಎಸ್‌ ಕಾರ್ಯಕರ್ತರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry